John 8:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಯೆಹೂದ್ಯರು, “ಯೇಸು ತನ್ನನ್ನು ತಾನೇ ಕೊಂದುಕೊಳ್ಳುವನೇ? ಅದಕ್ಕಾಗಿಯೇ, ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳಿದನೇ?” ಎಂದು ತಮ್ಮತಮ್ಮೊಳಗೆ ಮಾತಾಡಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಹೂದ್ಯರು, “ನಾವು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ?” ಎಂದು ಮಾತನಾಡಿಕೊಂಡರು.
Kannada BSI Bible 2016
ಅದಕ್ಕೆ ಯೆಹೂದ್ಯರು--ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿ ದ್ದಾನೋ? ಯಾಕಂದರೆ--ನಾನು ಹೋಗುವಲ್ಲಿಗೆ ನೀವು ಬರಲಾರಿರಿ ಎಂದು ಹೇಳುತ್ತಾನಲ್ಲಾ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮಾತಿಗೆ ಯೆಹೂದ್ಯರು - ನಾನು ಹೋಗುವಲ್ಲಿಗೆ ನೀವು ಬರಲಾರಿರೆಂದು ಹೇಳುತ್ತಾನಲ್ಲಾ? ಇವನು ತನ್ನನ್ನು ತಾನೇ ಕೊಂದುಕೊಳ್ಳಬೇಕೆಂದಿದ್ದಾನೋ ಎಂದು ಮಾತಾಡಿಕೊಂಡರು.
Kannada Bible (KNCL) BSI 2016
ಅದಕ್ಕೆ ಯೆಹೂದ್ಯರು, ‘ತಾನು ಹೋಗುವಲ್ಲಿಗೆ ನಮ್ಮಿಂದ ಬರಲಾಗದಂತೆ! ಹಾಗೆಂದರೆ ಆತ್ಮಹತ್ಯೆ ಮಾಡಿಕೊಳ್ಳಬೇಕೆಂಬುದು ಇವನ ಇಂಗಿತವೆ?’ ಎಂದು ಮಾತನಾಡಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೆಹೂದ್ಯರು, “ಈತನು ಆತ್ಮಹತ್ಯೆ ಮಾಡಿಕೊಳ್ಳಬೇಕೆಂದಿದ್ದಾನೋ? ಏಕೆಂದರೆ, ‘ನಾನು ಹೋಗುವಲ್ಲಿಗೆ ನೀವು ಬರಲಾರಿರಿ,’ ಎಂದು ಹೇಳುತ್ತಾನಲ್ಲಾ?” ಎಂದರು.