John 8:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿಮ್ಮ ಬಗ್ಗೆ ಹೇಳಲು ನನ್ನಲ್ಲಿ ಅನೇಕ ಸಂಗತಿಗಳಿವೆ. ನಾನು ನಿಮಗೆ ತೀರ್ಪು ಮಾಡಬಲ್ಲೆನು. ಆದರೆ ನನ್ನನ್ನು ಕಳುಹಿಸಿದಾತನಿಂದ ನಾನು ಕೇಳಿದ ಸಂಗತಿಗಳನ್ನು ಮಾತ್ರ ಜನರಿಗೆ ಹೇಳುತ್ತೇನೆ. ಆತನು ಸತ್ಯವನ್ನೇ ತಿಳಿಸುತ್ತಾನೆ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ, ನಿಮ್ಮ ಮೇಲೆ ತೀರ್ಪು ಮಾಡುವುದಕ್ಕೂ ಅನೇಕ ಸಂಗತಿಗಳು ನನಗುಂಟು. ಆದರೆ ನನ್ನನ್ನು ಕಳುಹಿಸಿ ಕೊಟ್ಟಾತನು ಸತ್ಯವಂತನು. ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ” ಎಂದನು.
Kannada BSI Bible 2016
ನಿಮ್ಮ ವಿಷಯವಾಗಿ ಹೇಳುವದಕ್ಕೂ ತೀರ್ಪುಮಾಡುವದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದಾತನು ಸತ್ಯವಂತನು. ನಾನು ಆತನಿಂದ ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮ ವಿಷಯವಾಗಿ ಮಾತಾಡುವದಕ್ಕೂ ನಿಮ್ಮ ಮೇಲೆ ತೀರ್ಪುಮಾಡುವದಕ್ಕೂ ಅನೇಕ ಸಂಗತಿಗಳು ನನಗುಂಟು; ಆದರೆ ನನ್ನನ್ನು ಕಳುಹಿಸಿಕೊಟ್ಟಾತನು ಸತ್ಯವಂತನು; ಆತನಿಂದ ನಾನು ಕೇಳಿದವುಗಳನ್ನೇ ಲೋಕಕ್ಕೆ ಹೇಳುತ್ತೇನೆ ಅಂದನು.
Kannada Bible (KNCL) BSI 2016
ಯೇಸು, “ನಾನು ಯಾರೆಂದು ನಿಮಗೆ ಮೊದಲಿನಿಂದಲೂ ತಿಳಿಸುತ್ತಾ ಬಂದಿದ್ದೇನೆ. ನಿಮ್ಮನ್ನು ಕುರಿತು ನಾನು ಎಷ್ಟೋ ಹೇಳಿಯೇನು; ಎಷ್ಟೋ ಖಂಡಿಸಿಯೇನು. ಆದರೆ ನನ್ನನ್ನು ಕಳುಹಿಸಿದಾತನು ಹೇಳಿದ್ದನ್ನೇ ಲೋಕಕ್ಕೆ ಸಾರುತ್ತೇನೆ. ಆತನು ಸತ್ಯಸ್ವರೂಪಿ,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮ ವಿಷಯವಾಗಿ ಮಾತನಾಡುವುದಕ್ಕೂ ತೀರ್ಪುಮಾಡುವುದಕ್ಕೂ ನನಗೆ ಅನೇಕ ವಿಷಯಗಳಿವೆ. ಆದರೆ ನನ್ನನ್ನು ಕಳುಹಿಸಿದ ತಂದೆಯು ಸತ್ಯವಂತರು. ನಾನು ಅವರಿಂದ ಕೇಳಿದವುಗಳನ್ನು ಮಾತ್ರವೇ ಲೋಕಕ್ಕೆ ಹೇಳುತ್ತೇನೆ,” ಎಂದರು.