John 8:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಆತನು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೇರಿಸುವಿರಿ (ಕೊಲ್ಲುವಿರಿ). ನಾನೇ ಆತನೆಂಬುದು ಆಗ ನಿಮಗೆ ತಿಳಿಯುವುದು. ನಾನು ಈ ಕಾರ್ಯಗಳನ್ನು ನನ್ನ ಸ್ವಂತ ಅಧಿಕಾರದಿಂದ ಮಾಡುತ್ತಿಲ್ಲ ಎಂಬುದನ್ನು ನೀವು ತಿಳಿದುಕೊಳ್ಳುವಿರಿ. ಅಲ್ಲದೆ, ತಂದೆಯು ನನಗೆ ಉಪದೇಶಿಸಿದ ಸಂಗತಿಗಳನ್ನು ಮಾತ್ರ ನಾನು ಹೇಳುತ್ತೇನೆಂಬುದೂ ನಿಮಗೆ ಅರಿವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಯೇಸು ಅವರಿಗೆ, “ನೀವು ಮನುಷ್ಯಕುಮಾರನನ್ನು ಮೇಲಕ್ಕೆತ್ತಿದಾಗ, ನಾನೇ ಆತನೆಂದೂ, ನನ್ನಷ್ಟಕ್ಕೆ ನಾನೇ ಏನೂ ಮಾಡಲಾರೆನೆಂದು ನೀವು ತಿಳಿದುಕೊಳ್ಳುವಿರಿ. ಆದರೆ ನನ್ನ ತಂದೆಯು ನನಗೆ ಬೋಧಿಸಿದ ಸಂಗತಿಗಳನ್ನೇ ಮಾತನಾಡುತ್ತೇನೆ.
Kannada BSI Bible 2016
ಆಮೇಲೆ ಯೇಸು ಅವ ರಿಗೆ--ಮನುಷ್ಯಕುಮಾರನನ್ನು ನೀವು ಮೇಲಕ್ಕೆತ್ತಿದಾಗ ನಾನೇ ಆತನೆಂದೂ ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ತಿಳಿಸಿದ ಹಾಗೆ ಈ ಸಂಗತಿ ಗಳನ್ನು ಹೇಳುತ್ತೇನೆಂದೂ ನೀವು ತಿಳಿದುಕೊಳ್ಳುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಯೇಸು - ನೀವು ಮನುಷ್ಯಕುಮಾರನನ್ನು ಎತ್ತರದಲ್ಲಿಟ್ಟಾಗ ಇವನೇ ಆತನೆಂದೂ ತನ್ನಷ್ಟಕ್ಕೆ ತಾನೇ ಏನೂ ಮಾಡದೆ ತಂದೆಯು ತನಗೆ ಬೋಧಿಸಿದ ಹಾಗೆ ಅದನ್ನೆಲ್ಲಾ ಮಾತಾಡಿದನೆಂದೂ ನನ್ನ ವಿಷಯವಾಗಿ ನಿಮಗೆ ತಿಳಿಯುವದು.
Kannada Bible (KNCL) BSI 2016
ಎಂದೇ ಯೇಸು ಮತ್ತೆ ಇಂತೆಂದರು: “ನರಪುತ್ರನನ್ನು ನೀವು ಮೇಲಕ್ಕೇರಿಸಿದಾಗ, ‘ಇರುವಾತನೇ ನಾನು’ ಎಂದು ನಿಮಗೆ ತಿಳಿಯುವುದು. ನಾನಾಗಿಯೇ ಏನನ್ನೂ ಮಾಡುವುದಿಲ್ಲವೆಂದೂ ಪಿತನು ನನಗೆ ಬೋಧಿಸಿದಂತೆ ನಾನು ಮಾತನಾಡುತ್ತೇನೆಂದೂ ನಿಮಗೆ ಆಗ ಅರಿವಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ಮನುಷ್ಯಪುತ್ರನಾದ ನನ್ನನ್ನು ನೀವು ಮೇಲಕ್ಕೇರಿಸಿದಾಗ ‘ನಾನೇ ಆತನು’ ಎಂದು ನಿಮಗೆ ತಿಳಿಯುವುದು. ನನ್ನಷ್ಟಕ್ಕೆ ನಾನೇ ಏನೂ ಮಾಡದೆ ನನ್ನ ತಂದೆಯು ನನಗೆ ಬೋಧಿಸಿದಂತೆ ನಾನು ಈ ಸಂಗತಿಗಳನ್ನು ಮಾತನಾಡುತ್ತೇನೆ ಎಂದೂ ನೀವು ತಿಳಿದುಕೊಳ್ಳುವಿರಿ.