John 8:29 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನನ್ನನ್ನು ಕಳುಹಿಸಿದಾತನು (ದೇವರು) ನನ್ನೊಂದಿಗೆ ಇದ್ದಾನೆ. ಆತನಿಗೆ ಮೆಚ್ಚಿಕೆಯಾದದ್ದನ್ನೇ ನಾನು ಯಾವಾಗಲೂ ಮಾಡುತ್ತೇನೆ. ಆದ್ದರಿಂದ ಆತನು ನನ್ನನ್ನು ಒಬ್ಬಂಟಿಗನಾಗಿ ಬಿಟ್ಟುಬಿಟ್ಟಿಲ್ಲ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ. ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವುದರಿಂದ, ಆತನು ನನ್ನನ್ನು ಒಬ್ಬಂಟಿಗನಾಗಿ ಬಿಡುವುದಿಲ್ಲ” ಎಂದನು.
Kannada BSI Bible 2016
ಇದಲ್ಲದೆ ನನ್ನನ್ನು ಕಳುಹಿಸಿದಾತನು ನನ್ನ ಸಂಗಡ ಇದ್ದಾನೆ; ತಂದೆಯು ನನ್ನನ್ನು ಒಂಟಿಯಾಗಿ ಬಿಡಲಿಲ್ಲ;ಯಾಕಂದರೆ ಆತನು ಮೆಚ್ಚುವವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಕಳುಹಿಸಿಕೊಟ್ಟಾತನು ನನ್ನ ಸಂಗಡ ಇದ್ದಾನೆ, ನಾನು ಆತನಿಗೆ ಮೆಚ್ಚಿಕೆಯಾದದ್ದನ್ನು ಯಾವಾಗಲೂ ಮಾಡುವದರಿಂದ ಆತನು ನನ್ನನ್ನು ಒಂಟಿಗನಾಗಿ ಬಿಡಲಿಲ್ಲ ಅಂದನು.
Kannada Bible (KNCL) BSI 2016
ನನ್ನನ್ನು ಕಳುಹಿಸಿದಾತನು ನನ್ನೊಡನಿದ್ದಾನೆ. ಆತನು ಮೆಚ್ಚುವುದನ್ನೇ ನಾನು ಸತತವೂ ಮಾಡುವುದರಿಂದ ಆತನು ನನ್ನನ್ನು ಏಕಾಕಿಯಾಗಿ ಬಿಟ್ಟಿಲ್ಲ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಕಳುಹಿಸಿದ ತಂದೆ ನನ್ನ ಸಂಗಡ ಇದ್ದಾರೆ. ಅವರು ನನ್ನನ್ನು ಒಬ್ಬಂಟಿಗನನ್ನಾಗಿ ಬಿಡಲಿಲ್ಲ, ಏಕೆಂದರೆ ಅವರಿಗೆ ಮೆಚ್ಚಿದವುಗಳನ್ನೇ ನಾನು ಯಾವಾಗಲೂ ಮಾಡುತ್ತೇನೆ,” ಎಂದರು.