John 8:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದ್ದರಿಂದ ಯೇಸು ತನ್ನಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ, “ನೀವು ನನ್ನ ಉಪದೇಶಕ್ಕೆ ವಿಧೇಯರಾಗಿದ್ದರೆ, ನೀವು ನಿಜವಾಗಿಯೂ ನನ್ನ ಹಿಂಬಾಲಕರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿರುವುದಾದರೆ, ನಿಜವಾಗಿಯೂ ನೀವು ನನ್ನ ಶಿಷ್ಯರಾಗಿರುವಿರಿ.
Kannada BSI Bible 2016
ಆತನ ಮೇಲೆ ನಂಬಿಕೆಯಿಟ್ಟ ಆ ಯೆಹೂದ್ಯರಿಗೆ ಯೇಸು ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾ ಗಿಯೂ ನೀವು ನನ್ನ ಶಿಷ್ಯರಾಗುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು ತನ್ನನ್ನು ನಂಬಿದ ಯೆಹೂದ್ಯರಿಗೆ - ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡವರಾದರೆ ನಿಜವಾಗಿ ನನ್ನ ಶಿಷ್ಯರಾಗಿದ್ದು ಸತ್ಯವನ್ನು ತಿಳಿದುಕೊಳ್ಳುವಿರಿ;
Kannada Bible (KNCL) BSI 2016
ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ತಮ್ಮನ್ನು ನಂಬಿದ್ದ ಯೆಹೂದ್ಯರಿಗೆ ಹೇಳಿದ್ದೇನೆಂದರೆ, “ನೀವು ನನ್ನ ವಾಕ್ಯದಲ್ಲಿ ನೆಲೆಗೊಂಡಿದ್ದರೆ ನಿಜವಾಗಿಯೂ ನೀವು ನನ್ನ ಶಿಷ್ಯರಾಗುವಿರಿ.