John 8:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯರು, “ಅಬ್ರಹಾಮನೇ ನಮ್ಮ ತಂದೆ” ಎಂದು ಹೇಳಿದರು. ಯೇಸು, “ನೀವು ನಿಜವಾಗಿಯೂ ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದ ಕಾರ್ಯಗಳನ್ನೇ ಮಾಡುತ್ತಿದ್ದಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವರು, “ನಮ್ಮ ತಂದೆಯು ಅಬ್ರಹಾಮನೇ” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ, ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದೀರಿ.
Kannada BSI Bible 2016
ಅವರು ಪ್ರತ್ಯುತ್ತರವಾಗಿ ಆತನಿಗೆ--ಅಬ್ರಹಾಮನು ನಮ್ಮ ತಂದೆ ಅಂದರು; ಅದಕ್ಕೆ ಯೇಸು ಅವರಿಗೆ--ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನ ಕ್ರಿಯೆಗಳನ್ನು ಮಾಡು ತ್ತಿದ್ದಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕವರು - ನಮ್ಮ ತಂದೆಯು ಅಬ್ರಹಾಮನೇ ಅಂದಾಗ ಯೇಸು ಅವರಿಗೆ - ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದಂಥ ಕೃತ್ಯಗಳನ್ನು ಮಾಡುತ್ತಿದ್ದಿರಿ.
Kannada Bible (KNCL) BSI 2016
ಆಗ ಆ ಯೆಹೂದ್ಯರು, ಅಬ್ರಹಾಮನೇ ನಮ್ಮ ತಂದೆ,” ಎಂದು ಮರುನುಡಿದರು. ಯೇಸು, “ಅಬ್ರಹಾಮನ ಮಕ್ಕಳು ನೀವಾಗಿದ್ದರೆ ಅಬ್ರಹಾಮನು ಮಾಡಿದಂತೆ ನೀವು ಮಾಡುತ್ತಿದ್ದಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯರು ಯೇಸುವಿಗೆ, “ಅಬ್ರಹಾಮನು ನಮ್ಮ ತಂದೆ,” ಎಂದರು. ಅದಕ್ಕೆ ಯೇಸು ಅವರಿಗೆ, “ನೀವು ಅಬ್ರಹಾಮನ ಮಕ್ಕಳಾಗಿದ್ದರೆ ಅಬ್ರಹಾಮನು ಮಾಡಿದ ಕ್ರಿಯೆಗಳನ್ನೇ ಮಾಡುತ್ತಿದ್ದಿರಿ.