John 8:40 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾಗಿದ್ದೇನೆ. ಆದರೆ ನೀವು ನನ್ನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದೀರಿ. ಅಬ್ರಹಾಮನು ಅಂಥದ್ದೇನನ್ನೂ ಮಾಡಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ, ನೀವು ಹಾಗೆ ಮಾಡದೇ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವುದಕ್ಕೆ ಹುಡುಕುತ್ತಿದ್ದೀರಿ. ಅಬ್ರಹಾಮನು ಹೀಗೆ ಮಾಡಲಿಲ್ಲ.
Kannada BSI Bible 2016
ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲುವದಕ್ಕೆ ನೋಡುತ್ತೀರಿ; ಇದನ್ನು ಅಬ್ರಹಾಮನು ಮಾಡಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಹಾಗೆ ಮಾಡದೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದವನಾದ ನನ್ನನ್ನು ಕೊಲ್ಲುವದಕ್ಕೆ ನೋಡುತ್ತೀರಿ; ಅಬ್ರಹಾಮನು ಹೀಗೆ ಮಾಡಲಿಲ್ಲ.
Kannada Bible (KNCL) BSI 2016
ಅದಕ್ಕೆ ಬದಲಾಗಿ ದೇವರಿಂದಲೇ ತಿಳಿದ ಸತ್ಯವನ್ನು ನಿಮಗೆ ಹೇಳುತ್ತಿರುವ ನನ್ನನ್ನು ಕೊಲ್ಲಲು ಹವಣಿಸುತ್ತಿದ್ದೀರಿ. ಅಬ್ರಹಾಮನು ಹಾಗೇನೂ ಮಾಡಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರಿಂದ ಕೇಳಿದ ಸತ್ಯವನ್ನು ನಿಮಗೆ ಹೇಳಿದ ನನ್ನನ್ನು ಈಗ ಕೊಲ್ಲಲು ಪ್ರಯತ್ನಿಸುತ್ತೀರಿ. ಇಂತಹ ಕ್ರಿಯೆಗಳನ್ನು ಅಬ್ರಹಾಮನು ಮಾಡಲಿಲ್ಲ.