John 8:47 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರಿಂದ ಹುಟ್ಟಿದವನು ದೇವರು ಹೇಳುವ ಮಾತುಗಳನ್ನು ಸ್ವೀಕರಿಸಿಕೊಳ್ಳುವನು. ಆದರೆ ನೀವು ದೇವರಿಂದ ಹುಟ್ಟಿಲ್ಲದ ಕಾರಣ ಆತನ ಮಾತುಗಳನ್ನು ಸ್ವೀಕರಿಸಿಕೊಳ್ಳುವುದಿಲ್ಲ” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲದ ಕಾರಣ ನೀವು ದೇವರ ವಾಕ್ಯಕ್ಕೆ ಕಿವಿಗೊಡುವುದಿಲ್ಲ” ಎಂದು ಹೇಳಿದನು.
Kannada BSI Bible 2016
ದೇವರಿಗೆ ಸಂಬಂಧಪಟ್ಟವನು ದೇವರ ವಾಕ್ಯಗಳನ್ನು ಕೇಳುತ್ತಾನೆ. ಆದರೆ ನೀವು ದೇವರಿಗೆ ಸಂಬಂಧಪಟ್ಟವರಲ್ಲದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರಿಂದ ಹುಟ್ಟಿದವನು ದೇವರ ಮಾತುಗಳನ್ನು ಕೇಳುತ್ತಾನೆ. ನೀವು ದೇವರಿಂದ ಹುಟ್ಟದ ಕಾರಣ ಅವುಗಳನ್ನು ಕೇಳುವದಿಲ್ಲ ಎಂದು ಹೇಳಿದನು.
Kannada Bible (KNCL) BSI 2016
ದೇವರ ಮಕ್ಕಳು ದೇವರ ಮಾತಿಗೆ ಕಿವಿಗೊಡುತ್ತಾರೆ. ನೀವೋ ದೇವರ ಮಕ್ಕಳಲ್ಲ, ಆದುದರಿಂದಲೇ ಕಿವಿಗೊಡುವುದಿಲ್ಲ,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರಿಗೆ ಸೇರಿದವನು ದೇವರ ವಾಕ್ಯಕ್ಕೆ ಕಿವಿಗೊಡುತ್ತಾನೆ. ನೀವು ದೇವರಿಗೆ ಸೇರಿದವರಲ್ಲ. ಆದ್ದರಿಂದ ನೀವು ಕಿವಿಗೊಡುವುದಿಲ್ಲ,” ಎಂದು ಹೇಳಿದರು.