John 8:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನನ್ನೊಳಗೆ ದೆವ್ವವಿಲ್ಲ. ನನ್ನ ತಂದೆಗೆ ನಾನು ಗೌರವ ಕೊಡುತ್ತೇನೆ, ಆದರೆ ನೀವು ನನಗೆ ಗೌರವ ಕೊಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೇಸು; “ನನಗೆ ದೆವ್ವ ಹಿಡಿದಿಲ್ಲ. ನಾನು ನನ್ನ ತಂದೆಯನ್ನು ಗೌರವಿಸುತ್ತೇನೆ, ಆದರೆ ನೀವು ನನಗೆ ಅವಮಾನಪಡಿಸುತ್ತೀದ್ದಿರಿ.
Kannada BSI Bible 2016
ಅದಕ್ಕೆ ಯೇಸು ಪ್ರತ್ಯುತ್ತರವಾಗಿ-- ನನಗೆ ದೆವ್ವ ಹಿಡಿದಿಲ್ಲ; ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ, ನೀವು ನನ್ನನ್ನು ಅವಮಾನ ಪಡಿಸುತ್ತೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ನಾನು ದೆವ್ವಹಿಡಿದವನಲ್ಲ, ನನ್ನ ತಂದೆಯನ್ನು ಸನ್ಮಾನಿಸುವವನಾಗಿದ್ದೇನೆ; ಆದರೂ ನೀವು ನನ್ನನ್ನು ಅವಮಾನಪಡಿಸುತ್ತೀರಿ.
Kannada Bible (KNCL) BSI 2016
ಅದಕ್ಕೆ ಯೇಸು, “ನಾನು ದೆವ್ವಹಿಡಿದವನಲ್ಲ, ನನ್ನ ಪಿತನನ್ನು ನಾನು ಗೌರವಿಸುತ್ತೇನೆ. ನೀವಾದರೋ ನನ್ನನ್ನು ಅವಮಾನಪಡಿಸುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು, “ನನಗೆ ದೆವ್ವ ಹಿಡಿದಿಲ್ಲ. ಆದರೆ ನನ್ನ ತಂದೆಯನ್ನು ಸನ್ಮಾನಿಸುತ್ತೇನೆ. ನೀವು ನನ್ನನ್ನು ಅವಮಾನಪಡಿಸುತ್ತೀರಿ.