John 8:5 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಂಥ ಕಾರ್ಯವನ್ನು ಮಾಡುವ ಪ್ರತಿಯೊಬ್ಬ ಸ್ತ್ರೀಯನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯ ಧರ್ಮಶಾಸ್ತ್ರವು ಆಜ್ಞಾಪಿಸುತ್ತದೆ. ಈಗ ನಾವೇನು ಮಾಡಬೇಕು? ನೀನೇ ಹೇಳು” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ?” ಎಂದು ಆತನನ್ನು ಕೇಳಿದರು.
Kannada BSI Bible 2016
ಇಂಥವರು ಕಲ್ಲೆಸೆಯಲ್ಪಡಬೇಕೆಂದು ಮೋಶೆಯು ನ್ಯಾಯಪ್ರಮಾಣದಲ್ಲಿ ನಮಗೆ ಅಪ್ಪಣೆ ಕೊಟ್ಟಿದ್ದಾನೆ; ಆದರೆ ನೀನು ಏನು ಹೇಳುತ್ತೀ ಎಂದು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ಧರ್ಮಶಾಸ್ತ್ರದಲ್ಲಿ ನಮಗೆ ಅಪ್ಪಣೆಕೊಟ್ಟಿದ್ದಾನೆ; ಈಕೆಯ ವಿಷಯದಲ್ಲಿ ನೀನು ಏನು ಹೇಳುತ್ತೀ ಎಂದು ಆತನನ್ನು ಕೇಳಿದರು.
Kannada Bible (KNCL) BSI 2016
ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯೇ ಧರ್ಮಶಾಸ್ತ್ರದಲ್ಲಿ ವಿಧಿಸಿದ್ದಾನೆ. ಈ ಕುರಿತು ನಿಮ್ಮ ಅಭಿಪ್ರಾಯವೇನು?” ಎಂದು ಪ್ರಶ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಂಥವರನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಯು ನಿಯಮದಲ್ಲಿ ನಮಗೆ ಆಜ್ಞಾಪಿಸಿದ್ದಾನೆ. ಆದ್ದರಿಂದ ನೀವು ಏನು ಹೇಳುತ್ತೀರಿ?” ಎಂದು ಕೇಳಿದರು.