John 8:51 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನನ್ನ ವಾಕ್ಯಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ” ಅಂದನು.
Kannada BSI Bible 2016
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ--ಒಬ್ಬನು ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಕಾಣುವದಿಲ್ಲ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾವನಾದರೂ ನನ್ನ ವಾಕ್ಯವನ್ನು ಕೈಕೊಂಡು ನಡೆದರೆ ಅವನು ಎಂದಿಗೂ ಸಾವನ್ನು ಕಾಣುವದಿಲ್ಲ ಅಂದನು.
Kannada Bible (KNCL) BSI 2016
ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಯಾರು ನನ್ನ ಮಾತನ್ನು ಪಾಲಿಸುತ್ತಾರೋ ಅವರು ಎಂದೆಂದಿಗೂ ಮರಣವನ್ನು ಕಾಣುವುದಿಲ್ಲ,” ಎಂದರು.