John 8:52 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯರು ಆತನಿಗೆ, “ನಿನ್ನೊಳಗೆ ದೆವ್ವವಿದೆ ಎಂದು ಈಗ ನಮಗೆ ತಿಳಿಯಿತು! ಅಬ್ರಹಾಮನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಆದರೆ ‘ನನ್ನ ಉಪದೇಶಕ್ಕೆ ವಿಧೇಯನಾಗುವವನು ಎಂದಿಗೂ ಸಾಯುವುದಿಲ್ಲ’ ಎಂದು ನೀನು ಹೇಳುತ್ತಿರುವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಯೆಹೂದ್ಯರು “ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು. ಅಬ್ರಹಾಮನು ಸತ್ತನು ಮತ್ತು ಪ್ರವಾದಿಗಳೂ ಸತ್ತರು, ಆದರೆ ನೀನು ‘ನನ್ನ ವಾಕ್ಯಕ್ಕೆ ವಿಧೇಯನಾದರೆ ಅವನು ನಿತ್ಯಮರಣವನ್ನು ಅನುಭವಿಸುವುದಿಲ್ಲ’ ಎಂದು ಹೇಳುತ್ತೀಯಲ್ಲಾ?
Kannada BSI Bible 2016
ಆಗ ಯೆಹೂದ್ಯರು ಆತನಿಗೆ--ನಿನಗೆ ದೆವ್ವ ಹಿಡಿದದೆ ಎಂದು ನಮಗೆ ಈಗ ತಿಳಿಯಿತು; ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು; ಆದರೆ--ಯಾವನಾದರೂ ನನ್ನ ಮಾತನ್ನು ಕೈಕೊಂಡರೆ ಅವನು ಎಂದಿಗೂ ಮರಣವನ್ನು ಅನುಭವಿಸುವದಿಲ್ಲವೆಂದು ನೀನು ಹೇಳುತ್ತೀಯಲ್ಲಾ;
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ಯೆಹೂದ್ಯರು - ನೀನು ದೆವ್ವಹಿಡಿದವನೆಂದು ಈಗ ನಮಗೆ ತಿಳಿಯಿತು; ಅಬ್ರಹಾಮನು ಸತ್ತನು. ಪ್ರವಾದಿಗಳೂ ಸತ್ತರು; ಆದರೆ ನೀನು - ನನ್ನ ವಾಕ್ಯವನ್ನು ಕೈಕೊಂಡು ನಡೆಯುವವನು ಎಂದಿಗೂ ಸಾವನ್ನು ಅನುಭವಿಸುವದಿಲ್ಲವೆಂದು ಹೇಳುತ್ತೀ.
Kannada Bible (KNCL) BSI 2016
“ನೀನು ದೆವ್ವಹಿಡಿದವನೆಂದು ಈಗ ನಮಗೆ ಸ್ಪಷ್ಟವಾಯಿತು. ಅಬ್ರಹಾಮನು ಸತ್ತುಹೋದನು; ಪ್ರವಾದಿಗಳೂ ಸತ್ತುಹೋದರು. ಆದರೂ ನೀನು, ‘ನನ್ನ ಮಾತಿಗೆ ಶರಣಾಗಿ ನಡೆಯುವವನು ಎಂದೆಂದಿಗೂ ಸಾವಿಗೆ ತುತ್ತಾಗನು,’ ಎಂದು ಹೇಳುತ್ತಿರುವೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯೆಹೂದಿ ನಾಯಕರು ಯೇಸುವಿಗೆ, “ನಿನಗೆ ದೆವ್ವ ಹಿಡಿದಿದೆ ಎಂದು ನಮಗೆ ಈಗ ತಿಳಿಯಿತು. ಅಬ್ರಹಾಮನು ಮತ್ತು ಪ್ರವಾದಿಗಳು ಸತ್ತರು. ಆದರೆ, ‘ಯಾರಾದರೂ ನನ್ನ ಮಾತನ್ನು ಪಾಲಿಸಿದರೆ ಅವರು ಎಂದೆಂದಿಗೂ ಮರಣ ಹೊಂದುವುದಿಲ್ಲ,’ ಎಂದು ನೀನು ಹೇಳುತ್ತೀಯಲ್ಲಾ?