John 8:53 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಮ್ಮತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೆಂದು ಭಾವಿಸಿಕೊಂಡಿರುವೆಯಾ? ಅಬ್ರಹಾಮನು ಸತ್ತುಹೋದನು ಮತ್ತು ಪ್ರವಾದಿಗಳು ಸಹ ಸತ್ತುಹೋದರು. ಹೀಗಿರಲು, ನೀನು ನಿನ್ನನ್ನು ಯಾರೆಂದು ಭಾವಿಸಿಕೊಂಡಿರುವೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸತ್ತುಹೋದ ನಮ್ಮ ತಂದೆಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು, ನಿನ್ನನ್ನೇ ನೀನು ಯಾರೆಂದು ಭಾವಿಸಿಕೊಳ್ಳುತ್ತಿದ್ದೀ?” ಎಂದು ಕೇಳಿದರು.
Kannada BSI Bible 2016
ಸತ್ತುಹೋದ ನಮ್ಮ ತಂದೆ ಯಾದ ಅಬ್ರಹಾಮನಿಗಿಂತಲೂ ನೀನು ದೊಡ್ಡ ವನೋ? ಪ್ರವಾದಿಗಳೂ ಸತ್ತುಹೋದರು. ನಿನ್ನನ್ನು ಯಾರೆಂದು ನೀನು ಮಾಡಿಕೊಳ್ಳುತ್ತೀ ಎಂದು ಕೇಳಲು
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಮೂಲಪುರುಷನಾದ ಅಬ್ರಹಾಮನಿಗಿಂತ ನೀನು ದೊಡ್ಡವನೋ? ಅವನೂ ಸತ್ತುಹೋದನು, ಪ್ರವಾದಿಗಳೂ ಸತ್ತುಹೋದರು; ನಿನ್ನನ್ನು ಯಾರೆಂತ ಮಾಡಿಕೊಳ್ಳುತ್ತೀ ಎಂದು ಹೇಳಲು
Kannada Bible (KNCL) BSI 2016
ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ಶ್ರೇಷ್ಠನೋ? ಆತನೂ ಸಾವಿಗೀಡಾದನು. ಪ್ರವಾದಿಗಳೂ ಸಾವಿಗೆ ಈಡಾಗಿರುವರು; ನೀನು ಯಾರೆಂದು ನಿನ್ನ ಎಣಿಕೆ?” ಎಂದು ಆ ಯೆಹೂದ್ಯ ಅಧಿಕಾರಿಗಳು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸತ್ತು ಹೋದ ನಮ್ಮ ತಂದೆ ಅಬ್ರಹಾಮನಿಗಿಂತಲೂ ನೀನು ದೊಡ್ಡವನೋ? ಪ್ರವಾದಿಗಳೂ ಸತ್ತುಹೋದರು. ನೀನು ನಿನ್ನನ್ನು ಯಾರನ್ನಾಗಿ ಮಾಡಿಕೊಂಡಿರುವೆ?” ಎಂದು ಕೇಳಿದರು.