John 8:54 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ, ಆ ಮಹಿಮೆಗೆ ಯಾವ ಬೆಲೆಯೂ ಇಲ್ಲ. ನನ್ನ ತಂದೆಯೇ ನನ್ನನ್ನು ಮಹಿಮೆಪಡಿಸುವನು. ನೀವು ಆತನನ್ನೇ ನಿಮ್ಮ ದೇವರೆಂದು ಹೇಳಿಕೊಳ್ಳುತ್ತೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ, ನೀವು ಆತನನ್ನು ನಿಮ್ಮ ದೇವರು ಅನ್ನುತ್ತೀರಿ,
Kannada BSI Bible 2016
ಯೇಸು--ನನ್ನನ್ನು ನಾನೇ ಸನ್ಮಾನಿಸಿಕೊಂಡರೆ ನನ್ನ ಸನ್ಮಾನವು ಏನೂ ಅಲ್ಲ; ನೀವು ಯಾವಾತನನ್ನು ನಿಮ್ಮ ದೇವರೆಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಸನ್ಮಾನಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆ ಹುರುಳಿಲ್ಲದ್ದು; ನನ್ನನ್ನು ಮಹಿಮೆಪಡಿಸುವವನು ನನ್ನ ತಂದೆಯೇ. ನೀವು ಆತನನ್ನು ನಮ್ಮ ದೇವರು ಅನ್ನುತ್ತೀರಿ; ಆದರೂ ನೀವು ಆತನನ್ನು ತಿಳಿಯದೆ ಇದ್ದೀರಿ.
Kannada Bible (KNCL) BSI 2016
ಯೇಸು ಪ್ರತ್ಯುತ್ತರವಾಗಿ, “ನನ್ನ ಘನತೆಗೌರವವನ್ನು ನಾನೇ ಸಾರ ಹೊರಟರೆ ಅದಕ್ಕೆ ಬೆಲೆಯಿರದು. ನನ್ನ ಘನತೆಗೌರವವನ್ನು ಸಾರುವವರಾದರೋ ನನ್ನ ಪಿತನು. ಆ ಪಿತನನ್ನು ಕುರಿತೇ ‘ಅವರು ನಮ್ಮ ದೇವರು’ ಎಂದು ನೀವು ಹೇಳಿಕೊಳ್ಳುತ್ತೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು, “ನನ್ನನ್ನು ನಾನೇ ಮಹಿಮೆಪಡಿಸಿಕೊಂಡರೆ ನನ್ನ ಮಹಿಮೆಯು ಏನೂ ಅಲ್ಲ. ನೀವು ಯಾರನ್ನು, ‘ಅವರೇ ನಮ್ಮ ದೇವರು’ ಎಂದು ಹೇಳುತ್ತೀರೋ ಆ ನನ್ನ ತಂದೆಯೇ ನನ್ನನ್ನು ಮಹಿಮೆ ಪಡಿಸುವವರು.