John 8:58 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ಅಬ್ರಹಾಮನು ಹುಟ್ಟುವುದಕ್ಕಿಂತ ಮೊದಲಿಂದಲೂ ನಾನು ಇದ್ದೇನೆ!” ಎಂದು ಉತ್ತರಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು, “ನಿಮಗೆ ನಾನು ನಿಜನಿಜವಾಗಿ ಹೇಳುತ್ತೇನೆ; ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ” ಎಂದನು.
Kannada BSI Bible 2016
ಯೇಸು ಅವರಿಗೆ--ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನಿಗಿಂತ ಮುಂಚೆಯೇ ನಾನು ಇದ್ದೇನೆ ಅಂದನು.ಆಗ ಅವರು ಆತನ ಮೇಲೆ ಕಲ್ಲುಗಳನ್ನು ಎಸೆಯಲು ತಕ್ಕೊಂಡರು; ಆದರೆ ಯೇಸು ಅಡಗಿಕೊಂಡು ಅವರ ಮಧ್ಯದಿಂದ ದೇವಾಲಯದ ಹೊರಗೆ ಬಂದು ಅಲ್ಲಿಂದ ಹಾದು ಹೊರಟು ಹೋದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು - ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವದಕ್ಕಿಂತ ಮುಂಚಿನಿಂದಲೂ ನಾನು ಇದ್ದೇನೆ ಅಂದನು.
Kannada Bible (KNCL) BSI 2016
ಯೇಸು ಅವರಿಗೆ, “ಅಬ್ರಹಾಮನು ಹುಟ್ಟುವುದಕ್ಕೆ ಮೊದಲಿನಿಂದಲೂ ನಾನಿದ್ದೇನೆ,” ಎಂದು ಮರುನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು ಅವರಿಗೆ, “ನಾನು ನಿಮಗೆ ನಿಜನಿಜವಾಗಿ ಹೇಳುತ್ತೇನೆ, ಅಬ್ರಹಾಮನು ಹುಟ್ಟುವುದಕ್ಕಿಂತ ಮುಂಚೆಯೇ ನಾನು ಇದ್ದೇನೆ,” ಎಂದರು.