John 8:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿದರೆ ಆತನ ಮೇಲೆ ಅಪವಾದ ಹೊರಿಸಲು ಸಾಧ್ಯವಾಗುತ್ತದೆ ಎಂದು ಈ ಪ್ರಶ್ನೆಯನ್ನು ಕೇಳಿದರು. ಆದರೆ ಯೇಸು ತಲೆ ಬಾಗಿಸಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆಯತೊಡಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆತನನ್ನು ಪರೀಕ್ಷಿಸುವವರಾಗಿ ಆತನ ಮೇಲೆ ತಪ್ಪುಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.
Kannada BSI Bible 2016
ಅವರು ಆತನನ್ನು ಶೋಧಿಸುವವರಾಗಿ ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೀಗೆ ಹೇಳಿ ದರು. ಆದರೆ ಯೇಸು ಅವರ ಮಾತುಗಳನ್ನು ಕೇಳದವ ನಂತೆ ಬೊಗ್ಗಿಕೊಂಡು ತನ್ನ ಬೆರಳಿನಿಂದ ನೆಲದ ಮೇಲೆ ಬರೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಮೇಲೆ ತಪ್ಪುಹೊರಿಸುವದಕ್ಕೆ ಏನಾದರೂ ಒಂದು ನಿವಿುತ್ತ ಬೇಕಾಗಿದ್ದದರಿಂದ ಈತನು ಏನನ್ನುತ್ತಾನೋ ನೋಡೋಣ ಎಂದು ಹಾಗೆ ಕೇಳಿದರು. ಆದರೆ ಯೇಸು ಬೊಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದನು.
Kannada Bible (KNCL) BSI 2016
ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ಅವರ ಮೇಲೆ ತಪ್ಪುಹೊರಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು. ಯೇಸುವಾದರೋ ಬಗ್ಗಿಕೊಂಡು ಬೆರಳಿನಿಂದ ಮರಳ ಮೇಲೆ ಏನನ್ನೋ ಬರೆಯುತ್ತಾ ಕುಳಿತರು. ಬಂದವರಾದರೋ ಮೇಲಿಂದ ಮೇಲೆ ಪ್ರಶ್ನೆಹಾಕುತ್ತಲೇ ಇದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಯೇಸುವನ್ನು ಮಾತಿನಲ್ಲಿ ಸಿಕ್ಕಿಸಿ ತಪ್ಪು ಹೊರಿಸಬೇಕೆಂದೇ ಹೀಗೆ ಕೇಳಿದರು. ಆದರೆ ಯೇಸು ಬಗ್ಗಿಕೊಂಡು ಬೆರಳಿನಿಂದ ನೆಲದ ಮೇಲೆ ಬರೆಯುತ್ತಾ ಇದ್ದರು.