John 8:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯ ನಾಯಕರು ಅದೇ ಪ್ರಶ್ನೆಯನ್ನು ಮತ್ತೆ ಕೇಳಿದರು. ಆಗ ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪ ಮಾಡಿಲ್ಲದವನು ಆಕೆಯ ಮೇಲೆ ಮೊದಲನೆಯ ಕಲ್ಲನ್ನು ಎಸೆಯಲಿ” ಎಂದು ಹೇಳಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಆತನನ್ನು ಬಿಡದೆ ಪ್ರಶ್ನಿಸುತ್ತಿರುವಾಗ, ಆತನು ನೆಟ್ಟಗೆ ಕುಳಿತುಕೊಂಡು, ಅವರಿಗೆ, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲು ಎಸೆಯಲಿ” ಎಂದು ಹೇಳಿದನು
Kannada BSI Bible 2016
ಆದರೆ ಅವರು ಬಿಡದೆ ಆತನನ್ನು ಕೇಳುತ್ತಿರಲು ಆತನು ಮೇಲಕ್ಕೆ ನೋಡಿ--ನಿಮ್ಮೊಳಗೆ ಯಾವನು ಪಾಪವಿಲ್ಲದವನಾಗಿದ್ದಾನೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಅವರಿಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಆತನನ್ನು ಬಿಡದೆ ಕೇಳುತ್ತಿರುವಾಗ ಆತನು ನೆಟ್ಟಗೆ ಕೂತುಕೊಂಡು ಅವರಿಗೆ - ನಿಮ್ಮಲ್ಲಿ ಪಾಪವಿಲ್ಲದವನು ಯಾರೋ ಅವನೇ ಮೊದಲು ಆಕೆಯ ಮೇಲೆ ಕಲ್ಲನ್ನು ಹಾಕಲಿ ಎಂದು ಹೇಳಿ
Kannada Bible (KNCL) BSI 2016
ಆಗ ಯೇಸು ನೆಟ್ಟಗೆ ಕುಳಿತು, “ನಿಮ್ಮಲ್ಲಿ ಪಾಪಮಾಡದವನು ಯಾವನೋ ಅಂಥವನು ಇವಳ ಮೇಲೆ ಮೊದಲನೆಯ ಕಲ್ಲು ಬೀರಲಿ,” ಎಂದು ಹೇಳಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಬಿಡದೆ ಪ್ರಶ್ನೆಗಳನ್ನು ಕೇಳುತ್ತಿರಲು ಯೇಸು ನೆಟ್ಟಗೆ ಕುಳಿತುಕೊಂಡು, “ನಿಮ್ಮಲ್ಲಿ ಪಾಪವಿಲ್ಲದವನು ಯಾರಿದ್ದಾನೋ ಅವನೇ ಮೊದಲು ಇವಳ ಮೇಲೆ ಕಲ್ಲು ಎಸೆಯಲಿ,” ಎಂದು ಅವರಿಗೆ ಹೇಳಿದರು.