John 8:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನ ಈ ಮಾತನ್ನು ಕೇಳಿದ ಆ ಜನರು ಒಬ್ಬೊಬ್ಬರಾಗಿ ಅಲ್ಲಿಂದ ಹೊರಟುಹೋದರು. ಮೊದಲು ಹಿರಿಯರು, ನಂತರ ಇತರರು ಹೊರಟುಹೋದರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ಆ ಸ್ತ್ರೀ. ಆಕೆಯು ಆತನ ಮುಂದೆ ನಿಂತುಕೊಂಡಿದ್ದಳು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಎಲ್ಲರೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬನೇ ಉಳಿದನು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.
Kannada BSI Bible 2016
ಅದನ್ನು ಕೇಳಿದವರು ತಮ್ಮ ಸ್ವಂತ ಮನಸ್ಸಾಕ್ಷಿಯಿಂದ ಮನವರಿಕೆಯಾಗಿ ಹಿರಿಯವನು ಮೊದಲುಗೊಂಡು ಕಡೆಯವನವರೆಗೂ ಒಬ್ಬೊಬ್ಬರಾಗಿ ಹೊರಗೆಹೋದರು; ಆಗ ಯೇಸು ಒಬ್ಬನೇ ಉಳಿದನು; ಆ ಹೆಂಗಸು ನಡುವೆ ನಿಂತು ಕೊಂಡಿದ್ದಳು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮಾತನ್ನು ಕೇಳಿ ತಾವೇ ಪಾಪಿಗಳೆಂದು ಮನಸ್ಸಿನಲ್ಲಿ ತಿಳುಕೊಂಡು ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬರ ಹಿಂದೊಬ್ಬರು ಹೊರಗೆ ಹೋದರು; ಯೇಸು ಒಬ್ಬನೇ ಉಳಿದನು, ಮತ್ತು ನಡುವೆ ನಿಂತಿದ್ದ ಹೆಂಗಸು ಅಲ್ಲೇ ಇದ್ದಳು.
Kannada Bible (KNCL) BSI 2016
ಇದನ್ನು ಕೇಳಿದ್ದೇ ಹಿರಿಯರಿಂದ ಹಿಡಿದು ಅವರೆಲ್ಲರೂ ಒಬ್ಬೊಬ್ಬರಾಗಿ ಅಲ್ಲಿಂದ ಕಾಲುಕಿತ್ತರು. ಕೊನೆಗೆ ಅಲ್ಲಿ ಉಳಿದವರೆಂದರೆ, ಯೇಸು ಮತ್ತು ನಿಂತುಕೊಂಡಿದ್ದ ಆ ಹೆಂಗಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದನ್ನು ಅವರು ಕೇಳಿ ಹಿರಿಯರು ಮೊದಲುಗೊಂಡು ಕಿರಿಯರವರೆಗೂ ಒಬ್ಬೊಬ್ಬರಾಗಿ ಹೊರಟು ಹೋದರು; ಆಗ ಯೇಸು ಒಬ್ಬರೇ ಉಳಿದರು. ಆ ಸ್ತ್ರೀಯು ಅಲ್ಲಿಯೇ ನಿಂತಿದ್ದಳು.