John 9:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮನುಷ್ಯನು, “ಯೇಸು ಎಂಬವನು ಸ್ವಲ್ಪ ಕೆಸರನ್ನು ಮಾಡಿ ನನ್ನ ಕಣ್ಣುಗಳಿಗೆ ಹಚ್ಚಿ, ಸಿಲೋವ ಕೊಳಕ್ಕೆ ಹೋಗಿ ತೊಳೆದುಕೊಳ್ಳಲು ಹೇಳಿದನು. ಅಂತೆಯೇ ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನಲ್ಲಿ ಕೆಸರು ಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ’ ಎಂದು ಹೇಳಿದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು. ಆಗ ನನಗೆ ದೃಷ್ಟಿ ಬಂತು” ಎಂದನು.
Kannada BSI Bible 2016
ಅವನು ಪ್ರತ್ಯುತ್ತರವಾಗಿ--ಯೇಸು ಎಂದು ಕರೆಯಲ್ಪಟ್ಟ ಮನುಷ್ಯನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ--ಸಿಲೋವಕೊಳಕ್ಕೆ ಹೋಗಿ ತೊಳೆ ದುಕೋ ಎಂದು ಹೇಳಲು ನಾನು ಹೋಗಿ ತೊಳೆದು ಕೊಂಡು ದೃಷ್ಟಿಯನ್ನು ಹೊಂದಿದೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಕೆಸರುಮಾಡಿ ನನ್ನ ಕಣ್ಣಿಗೆ ಹಚ್ಚಿ ಸಿಲೋವ ಕೊಳಕ್ಕೆ ಹೋಗಿ ತೊಳಕೋ ಎಂದು ಹೇಳಿದನು; ನಾನು ಹೋಗಿ ತೊಳಕೊಂಡೆನು; ಕಣ್ಣು ಬಂದವು ಅಂದನು.
Kannada Bible (KNCL) BSI 2016
ಅದಕ್ಕೆ ಅವನು, “ಯೇಸು ಎಂಬುವರು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿದರು, ‘ಶಿಲೋವಾಮಿಗೆ ಹೋಗಿ ತೊಳೆದುಕೊ,’ ಎಂದು ಹೇಳಿದರು; ನಾನು ಹೋಗಿ ತೊಳೆದುಕೊಂಡೆ; ನನಗೆ ಕಣ್ಣು ಬಂತು,” ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು, “ಯೇಸು ಎಂಬ ಹೆಸರುಳ್ಳ ಮನುಷ್ಯನು ಮಣ್ಣಿನ ಲೇಪಮಾಡಿ ನನ್ನ ಕಣ್ಣಿಗೆ ಹಚ್ಚಿ ನನಗೆ, ‘ಸಿಲೋವ ಕೊಳಕ್ಕೆ ಹೋಗಿ ತೊಳೆದುಕೋ,’ ಎಂದನು. ಅದರಂತೆ ನಾನು ಹೋಗಿ ತೊಳೆದುಕೊಂಡೆನು, ನನಗೆ ದೃಷ್ಟಿ ಬಂತು,” ಎಂದನು.