John 9:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಅವರು ಆ ಮನುಷ್ಯನಿಗೆ, “ನೀನು ದೃಷ್ಟಿಯನ್ನು ಹೇಗೆ ಪಡೆದುಕೊಂಡೆ?” ಎಂದು ಕೇಳಿದರು. ಆ ಮನುಷ್ಯನು, “ಆತನು ನನ್ನ ಕಣ್ಣುಗಳಿಗೆ ಕೆಸರನ್ನು ಹಚ್ಚಿದನು. ನಾನು ತೊಳೆದುಕೊಂಡೆನು. ಈಗ ನನಗೆ ಕಣ್ಣು ಕಾಣಿಸುತ್ತಿದೆ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಆ ಫರಿಸಾಯರು ಸಹ ಅವನನ್ನು ವಿಚಾರಿಸಿ ನಿನಗೆ ಹೇಗೆ ದೃಷ್ಟಿ ಬಂದಿತು ಎಂದು ಪುನಃ ಕೇಳಿದರು. ಅವನು ಅವರಿಗೆ, “ಅವನು ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳೆದುಕೊಂಡೆನು, ನನಗೆ ದೃಷ್ಟಿ ಬಂದಿತು” ಎಂದು ಉತ್ತರಕೊಟ್ಟನು.
Kannada BSI Bible 2016
ಆಗ ಫರಿಸಾಯರು ಸಹ ತಿರಿಗಿ ಅವನು ಹೇಗೆ ದೃಷ್ಟಿಹೊಂದಿದ್ದಾನೆಂದು ಅವ ನನ್ನು ಕೇಳಲು ಅವನು ಅವರಿಗೆ--ಆತನು ಕೆಸರನ್ನು ನನ್ನ ಕಣ್ಣುಗಳ ಮೇಲೆ ಇಡಲು ನಾನು ತೊಳೆದುಕೊಂಡ ವನಾಗಿ ನೋಡುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಈ ಫರಿಸಾಯರು ಸಹ ಅವನನ್ನು ವಿಚಾರಿಸಿ - ನಿನಗೆ ಹೇಗೆ ಕಣ್ಣು ಬಂದವು ಎಂದು ಕೇಳಿದರು. ಅವನು ಅವರಿಗೆ - ಕೆಸರನ್ನು ನನ್ನ ಕಣ್ಣಿನ ಮೇಲೆ ಇಟ್ಟನು, ನಾನು ತೊಳಕೊಂಡೆನು, ಕಣ್ಣು ಕಾಣುತ್ತವೆ ಎಂದು ಉತ್ತರಕೊಟ್ಟನು.
Kannada Bible (KNCL) BSI 2016
ಕಣ್ಣು ಬಂದುದು ಹೇಗೆಂದು ಫರಿಸಾಯರು ಅವನನ್ನು ಮತ್ತೆ ಕೇಳಿದರು. “ಯೇಸು ನನ್ನ ಕಣ್ಣುಗಳಿಗೆ ಮಣ್ಣಿನ ಲೇಪವನ್ನು ಹಚ್ಚಿದರು; ನಾನು ಹೋಗಿ ಕಣ್ಣುಗಳನ್ನು ತೊಳೆದುಕೊಳ್ಳುತ್ತಲೇ ನನಗೆ ದೃಷ್ಟಿ ಬಂತು,” ಎಂದನು ಅವನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಫರಿಸಾಯರು ಅವನಿಗೆ, ಹೇಗೆ ದೃಷ್ಟಿ ಬಂತು ಎಂದು ತಿರುಗಿ ಅವನನ್ನು ಕೇಳಲು, ಅವನು ಅವರಿಗೆ, “ಯೇಸು ಮಣ್ಣಿನ ಲೇಪವನ್ನು ನನ್ನ ಕಣ್ಣುಗಳ ಮೇಲಿಡಲು ನಾನು ತೊಳೆದುಕೊಂಡೆನು. ಈಗ ನೋಡುತ್ತೇನೆ,” ಎಂದನು.