John 9:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು (ಯೇಸು) ಸಬ್ಬತ್‌ದಿನದ ವಿಷಯದಲ್ಲಿ ಧರ್ಮಶಾಸ್ತ್ರಕ್ಕೆ ವಿಧೇಯನಾಗುವುದಿಲ್ಲ. ಆದ್ದರಿಂದ ಇವನು ದೇವರಿಂದ ಬಂದಿಲ್ಲ” ಎಂದು ಹೇಳಿದರು. ಇತರರು, “ಇವನು ಪಾಪಿಯಾಗಿದ್ದರೆ ಇಂಥ ಅದ್ಭುತಕಾರ್ಯಗಳನ್ನು ಹೇಗೆ ಮಾಡಲಾದೀತು?” ಎಂದರು. ಹೀಗೆ ಯೆಹೂದ್ಯರಲ್ಲೇ ಭಿನ್ನಾಭಿಪ್ರಾಯ ಉಂಟಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫರಿಸಾಯರಲ್ಲಿ ಕೆಲವರು, “ಈ ಮನುಷ್ಯನು ದೇವರಿಂದ ಬಂದವನಲ್ಲ, ಏಕೆಂದರೆ ಆತನು ಸಬ್ಬತ್ ದಿನವನ್ನು ಆಚರಿಸುವುದಿಲ್ಲ” ಎಂದರು. ಇನ್ನು ಕೆಲವರು, “ಇಂಥಾ ಮಹತ್ಕಾರ್ಯಗಳನ್ನು ಮಾಡುವುದು ಪಾಪಿಯಾದ ಮನುಷ್ಯನಿಂದ ಹೇಗಾದೀತು?” ಎಂದರು. ಹೀಗೆ ಅವರಲ್ಲಿ ಭೇದವುಂಟಾಯಿತು.
Kannada BSI Bible 2016
ತರುವಾಯ ಫರಿಸಾಯರಲ್ಲಿ ಕೆಲವರು--ಈ ಮನುಷ್ಯನು ದೇವರಿಗೆ ಸಂಬಂಧಪಟ್ಟವನಲ್ಲ; ಯಾಕಂದರೆ ಈತನು ಸಬ್ಬತ್‌ ದಿನವನ್ನು ಕೈಕೊಳ್ಳುವವನಲ್ಲ ಅಂದರು. ಬೇರೆಯ ವರು--ಪಾಪಿಯಾದ ಒಬ್ಬ ಮನುಷ್ಯನು ಇಂಥ ಅದ್ಭುತ ಕಾರ್ಯಗಳನ್ನು ಹೇಗೆ ಮಾಡುತ್ತಾನೆ ಅಂದರು. ಹೀಗೆ ಅವರಲ್ಲಿ ಭೇದವುಂಟಾ
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಫರಿಸಾಯರಲ್ಲಿ ಕೆಲವರು - ಈ ಮನುಷ್ಯನು ದೇವರಿಂದ ಬಂದವನಲ್ಲ; ಅವನು ಸಬ್ಬತ್‍ದಿವಸವನ್ನು ಲಕ್ಷ್ಯಮಾಡುವದಿಲ್ಲವಲ್ಲಾ ಅಂದರು. ಇನ್ನು ಕೆಲವರು - ಇಂಥ ಮಹತ್ತುಗಳನ್ನು ಮಾಡುವದು ಭಕ್ತಿಹೀನನ ಕೈಯಿಂದ ಹೇಗಾದೀತು? ಅಂದರು. ಹೀಗೆ ಅವರಲ್ಲಿ ಭೇದವಾಯಿತು.
Kannada Bible (KNCL) BSI 2016
ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ, ಅವನು ಸಬ್ಬತ್ ನಿಯಮವನ್ನು ಪಾಲಿಸುವುದಿಲ್ಲ,” ಎಂದರು. ಇತರರು, “ಪಾಪಿಯಾದವನು ಇಂಥ ಸೂಚಕಕಾರ್ಯಗಳನ್ನು ಮಾಡಲು ಸಾಧ್ಯವೆ?” ಎಂದರು. ಹೀಗೆ ಅವರಲ್ಲೇ ಭಿನ್ನಬೇಧವುಂಟಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫರಿಸಾಯರಲ್ಲಿ ಕೆಲವರು, “ಹೀಗೆ ಮಾಡಿದವನು ದೇವರಿಂದ ಬಂದವನಲ್ಲ. ಏಕೆಂದರೆ ಆತನು ಯೆಹೂದ್ಯರ ಸಬ್ಬತ್ ದಿನವನ್ನು ಕೈಗೊಳ್ಳುವುದಿಲ್ಲ,” ಎಂದರು. ಬೇರೆ ಕೆಲವರು, “ಹಾಗಾದರೆ ಪಾಪಿಯಾದ ಮನುಷ್ಯನು ಇಂಥ ಸೂಚಕಕಾರ್ಯಗಳನ್ನು ಮಾಡುವುದು ಹೇಗೆ?” ಎಂದರು. ಹೀಗೆ ಅವರಲ್ಲಿ ಭೇದ ಉಂಟಾಯಿತು.