John 9:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯನಾಯಕರು ಗುಣಹೊಂದಿದವನಿಗೆ, “ಆ ಮನುಷ್ಯನು (ಯೇಸು) ನಿನ್ನನ್ನು ಗುಣಪಡಿಸಿದನು ಮತ್ತು ನಿನಗೆ ಕಣ್ಣು ಕಾಣಿಸುತ್ತಿದೆ. ಆದರೆ ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ಕೇಳಿದರು. ಅದಕ್ಕೆ ಅವನು, “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಅವರು ಪುನಃ ಆ ಕುರುಡನನ್ನು, “ಆತನು ನಿನಗೆ ದೃಷ್ಟಿ ಕೊಟ್ಟದ್ದರಿಂದ ನೀನು ಆತನ ವಿಷಯವಾಗಿ ಏನು ಹೇಳುತ್ತೀ?” ಎಂದು ಕೇಳಿದಾಗ, ಅವನು “ಆತನು ಒಬ್ಬ ಪ್ರವಾದಿ” ಎಂದು ಉತ್ತರಕೊಟ್ಟನು.
Kannada BSI Bible 2016
ಅವರು ತಿರಿಗಿ ಕುರುಡನಿಗೆ--ನಿನ್ನ ಕಣ್ಣುಗಳನ್ನು ತೆರೆದಾತನ ವಿಷಯವಾಗಿ ನೀನು ಏನು ಹೇಳುತ್ತೀ ಅಂದಾಗ ಅವನು--ಆತನು ಒಬ್ಬ ಪ್ರವಾದಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಅವರು ತಿರಿಗಿ ಆ ಕುರುಡನನ್ನು - ಅವನು ನಿನಗೆ ಕಣ್ಣುಕೊಟ್ಟದ್ದರಿಂದ ನೀನು ಅವನ ವಿಷಯವಾಗಿ ಏನು ಹೇಳುತ್ತೀ ಎಂದು ಕೇಳಿದಾಗ ಅವನು - ಆತನು ಪ್ರವಾದಿ ಅನ್ನುತ್ತೇನೆ ಎಂದು ಹೇಳಿದನು.
Kannada Bible (KNCL) BSI 2016
ಆದ್ದರಿಂದ ಫರಿಸಾಯರು ಆ ಕುರುಡನನ್ನು ಕುರಿತು, “ಅವನೇ ನಿನಗೆ ಕಣ್ಣುಕೊಟ್ಟನೆಂದು ಹೇಳುತ್ತೀಯಲ್ಲಾ. ಅವನ ಬಗ್ಗೆ ನಿನಗೇನು ಅನ್ನಿಸುತ್ತದೆ?” ಎಂದು ವಿಚಾರಿಸಿದರು. ಅದಕ್ಕೆ ಅವನು, “ಅವರೊಬ್ಬ ಪ್ರವಾದಿಯೇ ಸರಿ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ತಿರುಗಿ, “ಆತನು ನಿನಗೆ ದೃಷ್ಟಿಕೊಟ್ಟದ್ದರಿಂದ ಆತನ ವಿಷಯವಾಗಿ ನೀನು ಏನು ಹೇಳುತ್ತೀ?” ಎಂದಾಗ, ಅವನು, “ಅವರು ಒಬ್ಬ ಪ್ರವಾದಿ,” ಎಂದನು.