John 9:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಮನುಷ್ಯನು ಮೊದಲು ಕುರುಡನಾಗಿದ್ದನು. ಆದರೆ ಈಗ ಇವನಿಗೆ ಗುಣವಾಗಿದೆ ಎಂದು ಯೆಹೂದ್ಯನಾಯಕರುಗಳು ನಂಬಲಿಲ್ಲ. ಆದ್ದರಿಂದ ಅವರು ಅವನ ತಂದೆತಾಯಿಗಳನ್ನು ಕರೆಯಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೃಷ್ಟಿ ಹೊಂದಿದವನ ವಿಷಯವಾಗಿ ಆ ಯೆಹೂದ್ಯರು; ಅವನ ತಂದೆತಾಯಿಗಳನ್ನು ಕರೆದು ವಿಚಾರಿಸುವವರೆಗೂ, ಅವನು ಹುಟ್ಟು ಕುರುಡನಾಗಿದ್ದು, ಈಗ ದೃಷ್ಟಿ ಹೊಂದಿದ್ದಾನೆಂಬುದನ್ನು ನಂಬಲಿಲ್ಲ.
Kannada BSI Bible 2016
ಆದರೆ ದೃಷ್ಟಿ ಹೊಂದಿದವನ ತಂದೆತಾಯಿ ಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ ಅವನು ಕುರುಡನಾಗಿದ್ದು ದೃಷ್ಟಿ ಹೊಂದಿ ದನೆಂದು ನಂಬಲಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಕಣ್ಣುಬಂದವನ ವಿಷಯವಾಗಿ ಆ ಯೆಹೂದ್ಯರು - ಇವನು ಕುರುಡನಾಗಿದ್ದು ಈಗ ಕಣ್ಣುಳ್ಳವನಾದನೆಂದು ನಂಬದೆ ಅವನ ತಂದೆತಾಯಿಗಳನ್ನು ಕರೆಯಿಸಿ -
Kannada Bible (KNCL) BSI 2016
ಆ ಕುರುಡನು ಹಿಂದೆ ನಿಜವಾಗಿಯೂ ಕುರುಡನಾಗಿದ್ದು ಈಗ ದೃಷ್ಟಿಪಡೆದಿದ್ದಾನೆ ಎಂದು ಯೆಹೂದ್ಯ ಅಧಿಕಾರಿಗಳು ನಂಬಲು ಒಪ್ಪಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೃಷ್ಟಿಹೊಂದಿದವನ ತಂದೆತಾಯಿಗಳನ್ನು ಕರೆಯುವವರೆಗೆ ಯೆಹೂದ್ಯರು ಅವನ ವಿಷಯವಾಗಿ, ಅವನು ಕುರುಡನಾಗಿದ್ದು ದೃಷ್ಟಿಹೊಂದಿದನೆಂದು ನಂಬಲಿಲ್ಲ.