John 9:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ಅವನ ತಂದೆತಾಯಿಗಳಿಗೆ, “ಇವನು ನಿಮ್ಮ ಮಗನೋ? ಇವನು ಹುಟ್ಟುಕುರುಡನೆಂದು ನೀವು ಹೇಳುತ್ತೀರಿ. ಹಾಗಾದರೆ ಇವನಿಗೆ ಈಗ ಹೇಗೆ ಕಣ್ಣು ಕಾಣಿಸುತ್ತದೆ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಹೇಗೆ ದೃಷ್ಟಿ ಬಂದಿತು?” ಎಂದು ಅವರನ್ನು ಕೇಳಿದರು.
Kannada BSI Bible 2016
ಅವರು--ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಅವನು ಹೇಗೆ ನೋಡುತ್ತಾನೆ ಎಂದು ಅವರನ್ನು ಕೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವಂಥ ನಿಮ್ಮ ಮಗನು ಇವನೋ? ಈಗ ಇವನಿಗೆ ಕಣ್ಣು ಹೇಗೆ ಬಂದವು ಎಂದು ಅವರನ್ನು ಕೇಳಿದರು.
Kannada Bible (KNCL) BSI 2016
ಈ ಕಾರಣ ಅವನ ಹೆತ್ತವರನ್ನು ಕರೆಯಿಸಿ, “ಇವನು ನಿಮ್ಮ ಮಗನೋ? ಇವನು ಹುಟ್ಟುಕುರುಡನೋ? ಹಾಗಾದರೆ ಇವನಿಗೆ ಈಗ ಕಣ್ಣು ಬಂದದ್ದು ಹೇಗೆ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು, “ಕುರುಡನಾಗಿ ಹುಟ್ಟಿದನೆಂದು ನೀವು ಹೇಳುವ ನಿಮ್ಮ ಮಗನು ಇವನೋ? ಹಾಗಾದರೆ ಈಗ ಇವನಿಗೆ ಕಣ್ಣು ಕಾಣುವುದು ಹೇಗೆ?” ಎಂದು ಅವರನ್ನು ಕೇಳಿದರು.