John 9:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನ ಶಿಷ್ಯರು ಆತನಿಗೆ, “ಗುರುವೇ, ಈ ಮನುಷ್ಯನು ಹುಟ್ಟು ಕುರುಡನಾಗಲು ಯಾರ ಪಾಪ ಕಾರಣ? ಅವನ ಸ್ವಂತ ಪಾಪವೇ ಅಥವಾ ಅವನ ತಂದೆತಾಯಿಗಳ ಪಾಪವೇ?” ಎಂದು ಕೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನ ಶಿಷ್ಯರು, “ಗುರುವೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಇವನೋ ಅಥವಾ ಇವನ ತಂದೆತಾಯಿಗಳೋ?” ಎಂದು ಆತನನ್ನು ಕೇಳಿದರು.
Kannada BSI Bible 2016
ಆತನ ಶಿಷ್ಯರು--ಬೋಧಕನೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಪಾಪಮಾಡಿದವರು ಯಾರು? ಈ ಮನುಷ್ಯನೋ ಅಥವಾ ಇವನ ತಂದೆ ತಾಯಿಗಳೋ ಎಂದು ಆತನನ್ನು ಕೇಳಿದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಆತನ ಶಿಷ್ಯರು - ಗುರುವೇ, ಇವನು ಕುರುಡನಾಗಿ ಹುಟ್ಟಿರುವದಕ್ಕೆ ಯಾರು ಪಾಪಮಾಡಿದರು? ಇವನೋ? ಇವನ ತಂದೆತಾಯಿಗಳೋ? ಎಂದು ಆತನನ್ನು ಕೇಳಿದ್ದಕ್ಕೆ
Kannada Bible (KNCL) BSI 2016
ಶಿಷ್ಯರು, “ಗುರುದೇವಾ, ಇವನು ಕುರುಡನಾಗಿ ಹುಟ್ಟಬೇಕಾದರೆ ಅದಕ್ಕೆ ಯಾರ ಪಾಪ ಕಾರಣ? ಇವನದೋ ಅಥವಾ ಇವನನ್ನು ಹೆತ್ತವರದೋ?” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸುವಿನ ಶಿಷ್ಯರು, “ಬೋಧಕರೇ, ಇವನು ಕುರುಡನಾಗಿ ಹುಟ್ಟಿರುವುದಕ್ಕೆ ಯಾರು ಪಾಪಮಾಡಿದರು? ಈ ಮನುಷ್ಯನ ಪಾಪದಿಂದಲೋ ಇವನ ತಂದೆತಾಯಿಗಳ ಪಾಪದಿಂದಲೋ?” ಎಂದು ಅವರನ್ನು ಕೇಳಿದರು.