John 9:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಈಗ ಅವನಿಗೆ ಹೇಗೆ ಕಣ್ಣು ಕಾಣಿಸುತ್ತದೆಯೋ ಯಾರು ಗುಣಪಡಿಸಿದರೋ ನಮಗೆ ತಿಳಿಯದು. ಅವನನ್ನೇ ಕೇಳಿ. ಇವನು ತನ್ನ ವಿಷಯವಾಗಿ ಹೇಳುವಷ್ಟು ಪ್ರಾಯಸ್ಥನಾಗಿದ್ದಾನೆ” ಎಂದು ಉತ್ತರಕೊಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗ ಇವನು ನೋಡುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೋ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ. ಇವನು ಪ್ರಾಯದವನಾಗಿದ್ದಾನಲ್ಲಾ, ಇವನೇ ತನ್ನ ವಿಷಯವಾಗಿ ಹೇಳುವನು” ಎಂದು ಉತ್ತರಕೊಟ್ಟರು.
Kannada BSI Bible 2016
ಆದರೆ ಅವನು ಈಗ ಯಾವದರ ಮೂಲಕ ನೋಡುತ್ತಾನೋ ನಮಗೆ ಗೊತ್ತಿಲ್ಲ; ಇಲ್ಲವೆ ಯಾರು ಅವನ ಕಣ್ಣುಗಳನ್ನು ತೆರೆದರೋ ಅದೂ ನಮಗೆ ಗೊತ್ತಿಲ್ಲ; ಅವನು ಪ್ರಾಯದವನಾಗಿದ್ದಾನೆ. ಅವನನ್ನೇ ಕೇಳಿರಿ; ಅವನೇ ತನ್ನ ವಿಷಯ ಮಾತನಾಡುವನು ಎಂದು ಹೇಳಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗ ಹೇಗೆ ಕಣ್ಣು ಬಂದವೋ ಅರಿಯೆವು; ಕಣ್ಣು ಕೊಟ್ಟವನು ಯಾರೋ ಅರಿಯೆವು; ಇವನನ್ನೇ ಕೇಳಿರಿ; ಪ್ರಾಯದವನಾಗಿದ್ದಾನಲ್ಲಾ; ಇವನೇ ತನ್ನ ವಿಷಯವಾಗಿ ಹೇಳುವನು ಎಂದು ಉತ್ತರಕೊಟ್ಟರು.
Kannada Bible (KNCL) BSI 2016
ಇವನನ್ನೇ ಕೇಳಿ, ಹೇಗೂ ಪ್ರಾಯದವನಾಗಿದ್ದಾನಲ್ಲವೆ? ತನ್ನ ವಿಷಯವಾಗಿ ತಾನೇ ಮಾತನಾಡಬಲ್ಲ,” ಎಂದು ಉತ್ತರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಇವನಿಗೆ ಈಗ ಕಣ್ಣು ಕಾಣುವುದು ಹೇಗೆಂದು ನಮಗೆ ಗೊತ್ತಿಲ್ಲ. ಯಾರು ಇವನ ಕಣ್ಣುಗಳನ್ನು ತೆರೆದರೆಂದೂ ನಮಗೆ ಗೊತ್ತಿಲ್ಲ, ಇವನನ್ನೇ ಕೇಳಿರಿ; ಇವನು ಪ್ರಾಯದವನಾಗಿದ್ದಾನೆ. ಇವನೇ ತನ್ನ ವಿಷಯವಾಗಿ ಮಾತನಾಡುವನು,” ಎಂದು ಹೇಳಿದರು.