John 9:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯನಾಯಕರು ಕುರುಡನಾಗಿದ್ದ ಆ ಮನುಷ್ಯನನ್ನು ಒಳಗೆ ಕರೆದು, “ನೀನು ದೇವರನ್ನು ಮಹಿಮೆಪಡಿಸಬೇಕು. ಈ ಮನುಷ್ಯನು (ಯೇಸು) ಪಾಪಿಯೆಂದು ನಮಗೆ ಗೊತ್ತಿದೆ” ಎಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.
Kannada BSI Bible 2016
ತರುವಾಯ ಅವರು ಆ ಕುರುಡನಾಗಿದ್ದ ಮನುಷ್ಯನನ್ನು ಕರೆದು ಅವನಿಗೆ--ದೇವರಿಗೆ ಸ್ತೋತ್ರ ಸಲ್ಲಿಸು; ಈ ಮನುಷ್ಯನು ಪಾಪಿಯೆಂದು ನಾವು ಬಲ್ಲೆವು ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು - ನೀನು ದೇವರಿಗೆ ಮಾನಬರುವಂತೆ ಹೇಳು; ಆ ಮನುಷ್ಯನು ಭಕ್ತಿಹೀನನೆಂದು ನಾವು ಬಲ್ಲೆವು ಎಂದು ಹೇಳಲು
Kannada Bible (KNCL) BSI 2016
ಅಧಿಕಾರಿಗಳು ಆ ಹುಟ್ಟು ಕುರುಡನನ್ನು ಮತ್ತೆ ಕರೆಯಿಸಿ, “ನೀನು ದೇವರ ಮುಂದೆ ಪ್ರಮಾಣಮಾಡಿ ಹೇಳು. ಆ ಮನುಷ್ಯ ಪಾಪಿಯೆಂದು ನಮಗೆ ಗೊತ್ತು,” ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ಕುರುಡನಾಗಿದ್ದವನನ್ನು ಮತ್ತೊಮ್ಮೆ ಕರೆದು ಅವನಿಗೆ, “ದೇವರಿಗೆ ಮಹಿಮೆಯನ್ನು ಸಲ್ಲಿಸು, ಆ ಮನುಷ್ಯ ಪಾಪಿ ಎಂದು ನಾವು ಬಲ್ಲೆವು,” ಎಂದರು.