John 9:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮನುಷ್ಯನು, “ಅವನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ. ಆದರೆ ನಾನು ಕುರುಡನಾಗಿದ್ದೆನು; ಈಗ ನನಗೆ ದೃಷ್ಟಿ ಬಂದಿದೆ ಎಂಬುದಂತೂ ನನಗೆ ಗೊತ್ತಿದೆ” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅವನು, “ಆತನು ಪಾಪಿಷ್ಠನೋ ಏನೋ ನನಗೆ ಗೊತ್ತಿಲ್ಲ, ಒಂದು ಮಾತ್ರ ಬಲ್ಲೆನು ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತಿದ್ದೇನೆ” ಎಂದನು.
Kannada BSI Bible 2016
ಅವನು ಪ್ರತ್ಯುತ್ತರವಾಗಿ--ಆತನು ಪಾಪಿಯೋ ಅಲ್ಲವೋ ನನಗೆ ಗೊತ್ತಿಲ್ಲ; ಒಂದು ಮಾತ್ರ ಬಲ್ಲೆನು; ಅದೇನಂದರೆ ನಾನು ಕುರುಡನಾಗಿದ್ದೆನು; ಈಗ ನಾನು ನೋಡುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು - ಆತನು ಭಕ್ತಿಹೀನನೋ ಏನೋ ನಾನರಿಯೆ, ಒಂದು ಮಾತ್ರ ಬಲ್ಲೆ, ಕುರುಡನಾಗಿದ್ದೆನು, ಈಗ ಕಣ್ಣು ಕಾಣುತ್ತವೆ ಅಂದನು.
Kannada Bible (KNCL) BSI 2016
ಉತ್ತರವಾಗಿ ಅವನು, “ಅವರು ಪಾಪಿಯೋ, ಅಲ್ಲವೋ ನಾನರಿಯೆ; ಆದರೆ ನಾನೊಮ್ಮೆ ಕುರುಡನಾಗಿದ್ದೆ; ಈಗಲಾದರೋ ಕಣ್ಣು ಕಾಣಿಸುತ್ತದೆ, ಇಷ್ಟುಮಾತ್ರ ಬಲ್ಲೆ, ಎಂದು ಹೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವನು, “ಅವರು ಪಾಪಿಯೋ ಏನೋ ನನಗೆ ಗೊತ್ತಿಲ್ಲ. ಒಂದು ಮಾತ್ರ ಬಲ್ಲೆ, ನಾನು ಕುರುಡನಾಗಿದ್ದೆನು; ಈಗ ನನಗೆ ಕಾಣುತ್ತದೆ,” ಎಂದು ಉತ್ತರಕೊಟ್ಟನು.