John 9:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಮನುಷ್ಯನು, “ಆಗಲೇ ನಿಮಗೆ ಅದನ್ನು ತಿಳಿಸಿದ್ದೇನೆ. ಆದರೆ ನೀವು ನನಗೆ ಕಿವಿಗೊಡಲಿಲ್ಲ. ಈಗ ಅದನ್ನು ಮತ್ತೆ ಏಕೆ ಕೇಳಬೇಕೆಂದಿದ್ದೀರಿ? ನೀವು ಸಹ ಆತನ ಹಿಂಬಾಲಕರಾಗಬೇಕೆಂದಿದ್ದೀರೋ?” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು, “ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ! ನೀವು ಯಾಕೆ ಪುನಃ ಪುನಃ ಕೇಳುತ್ತಿದ್ದೀರಿ? ನೀವು ಸಹ ಆತನ ಶಿಷ್ಯರಾಗುವುದಕ್ಕೆ ಬಯಸುತ್ತಿದ್ದೀರೋ?” ಎಂದನು.
Kannada BSI Bible 2016
ಅವನು ಪ್ರತ್ಯುತ್ತರವಾಗಿ ಅವರಿಗೆ--ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ; ಆದರೆ ನೀವು ಕೇಳಲಿಲ್ಲ; ನೀವು ಅದನ್ನು ತಿರಿಗಿ ಯಾಕೆ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸಿದೆಯೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮಗೆ ಆಗಲೇ ಹೇಳಿದೆನಲ್ಲಾ, ನೀವು ಕೇಳಲಿಲ್ಲ; ಯಾಕೆ ತಿರಿಗಿ ಕೇಳಬೇಕೆಂದಿದ್ದೀರಿ? ಆತನ ಶಿಷ್ಯರಾಗುವದಕ್ಕೆ ನಿಮಗೂ ಮನಸ್ಸದೆಯೋ? ಅಂದನು.
Kannada Bible (KNCL) BSI 2016
ಅವನು, “ನಿಮಗೆ ಆಗಲೇ ಹೇಳಿದ್ದೇನೆ. ಆದರೆ ನೀವು ನಂಬುವುದಿಲ್ಲ. ಅದನ್ನೇ ಏಕೆ ಮತ್ತೆ ಮತ್ತೆ ಕೇಳುತ್ತೀರಿ? ಅವನ ಶಿಷ್ಯರಾಗಲು ನಿಮಗೂ ಮನಸ್ಸಿದೆಯೇ” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಉತ್ತರವಾಗಿ, “ನಾನು ನಿಮಗೆ ಆಗಲೇ ಹೇಳಿದ್ದೇನಲ್ಲಾ. ಆದರೆ ನೀವು ಕೇಳಲಿಲ್ಲ, ನೀವು ತಿರುಗಿ ಏಕೆ ಕೇಳುತ್ತೀರಿ? ನೀವು ಸಹ ಅವರ ಶಿಷ್ಯರಾಗುವುದಕ್ಕೆ ಬಯಸುತ್ತೀರೋ?” ಎಂದನು.