John 9:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲವೆಂಬುದು ನಮ್ಮೆಲರಿಗೂ ಗೊತ್ತಿದೆ. ಆದರೆ ದೇವರು ತನ್ನನ್ನು ಆರಾಧಿಸುವವನಿಗೂ ಮತ್ತು ತನಗೆ ವಿಧೇಯನಾಗುವವನಿಗೂ ಕಿವಿಗೊಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾಪಿಷ್ಠರ ಪ್ರಾರ್ಥನೆಯನ್ನು ದೇವರು ಕೇಳುವುದಿಲ್ಲ, ಆದರೆ ಯಾರು ಭಕ್ತರಾಗಿದ್ದು ಆತನ ಚಿತ್ತದಂತೆ ನಡೆಯುತ್ತಾರೋ ಅವರ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
Kannada BSI Bible 2016
ದೇವರು ಪಾಪಿಗಳ ಪ್ರಾರ್ಥನೆ ಯನ್ನು ಕೇಳುವದಿಲ್ಲ; ಆದರೆ ಯಾವನಾದರೂ ದೇವ ರನ್ನು ಆರಾಧಿಸುವವನಾಗಿದ್ದು ಆತನ ಚಿತ್ತದಂತೆ ನಡೆದರೆ ಅವನ ಪ್ರಾರ್ಥನೆಯನ್ನು ಆತನು ಕೇಳು ತ್ತಾನೆಂದು ನಾವು ಬಲ್ಲೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಭಕ್ತಿಹೀನರ ಪ್ರಾರ್ಥನೆಯನ್ನು ದೇವರು ಕೇಳುವದಿಲ್ಲ; ಯಾವನು ಭಕ್ತನಾಗಿದ್ದು ಆತನ ಚಿತ್ತದಂತೆ ನಡೆಯುತ್ತಾನೋ ಅವನ ಪ್ರಾರ್ಥನೆಯನ್ನು ಕೇಳುತ್ತಾನೆಂದು ಬಲ್ಲೆವು.
Kannada Bible (KNCL) BSI 2016
ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಪಾಪಿಗಳಿಗೆ ಕಿವಿಗೊಡುವುದಿಲ್ಲ; ಆದರೆ ಯಾರು ದೇವರಿಗೆ ಭಯಪಡುವವರಾಗಿದ್ದು ಅವರ ಚಿತ್ತದಂತೆ ನಡೆಯುತ್ತಾರೋ, ಅಂಥವರಿಗೆ ಕಿವಿಗೊಡುತ್ತಾರೆಂದು ನಾವು ಬಲ್ಲೆವು.