John 9:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯನಾಯಕರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು! ನಮಗೇ ಉಪದೇಶಮಾಡುವಿಯಾ?” ಎಂದು ಉತ್ತರಕೊಟ್ಟರು. ಅಲ್ಲದೆ ಅವರು ಅವನನ್ನು ಬಲವಂತವಾಗಿ ಹೊರಗಟ್ಟಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಮಾತಿಗೆ ಅವರು, “ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನೀನು ನಮಗೆ ಉಪದೇಶಮಾಡುತ್ತಿಯೋ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
Kannada BSI Bible 2016
ಅದಕ್ಕೆ ಅವರು ಅವನಿಗೆ--ನೀನು ಕೇವಲ ಪಾಪ ದಲ್ಲಿಯೇ ಹುಟ್ಟಿದವನು; ನೀನು ನಮಗೆ ಬೋಧಿಸು ತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಮಾತಿಗೆ ಅವರು - ನೀನು ಕೇವಲ ಪಾಪದಲ್ಲಿ ಹುಟ್ಟಿದವನು, ನಮಗೆ ಉಪದೇಶಮಾಡುತ್ತೀಯೋ ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.
Kannada Bible (KNCL) BSI 2016
ಆಗ ಫರಿಸಾಯರು, “ಪಾಪದಲ್ಲೇ ಹುಟ್ಟಿ ಬೆಳೆದವನು ನೀನು, ನಮಗೇ ಬುದ್ಧಿಹೇಳಹೊರಟೆಯಾ?” ಎಂದು ಹೇಳಿ ಅವನನ್ನು ತಳ್ಳಿಬಿಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಅವರು, “ನೀನು ಪಾಪದಲ್ಲಿಯೇ ಪೂರ್ಣವಾಗಿ ಹುಟ್ಟಿದವನು. ನೀನು ನಮಗೆ ಬೋಧಿಸುತ್ತೀಯಾ?” ಎಂದು ಹೇಳಿ ಅವನನ್ನು ಹೊರಗೆ ಹಾಕಿದರು.