John 9:35 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೆಹೂದ್ಯನಾಯಕರು ಆ ಮನುಷ್ಯನನ್ನು ಹೊರಗಟ್ಟಿದ್ದು ಯೇಸುವಿಗೆ ತಿಳಿಯಿತು. ಯೇಸು ಆ ಮನುಷ್ಯನನ್ನು ಕಂಡು, “ನೀನು ಮನುಷ್ಯಕುಮಾರನಲ್ಲಿ ನಂಬಿಕೆಯಿಡುವಿಯಾ?” ಎಂದು ಕೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು, “ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ?” ಎಂದು ಕೇಳಿದನು.
Kannada BSI Bible 2016
ಅವರು ಅವನನ್ನು ಹೊರಗೆ ಹಾಕಿದ್ದನ್ನು ಯೇಸು ಕೇಳಿ ಅವನನ್ನು ಕಂಡು ಅವನಿಗೆ--ನೀನು ದೇವರ ಮಗನನ್ನು ನಂಬುತ್ತೀಯೋ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನನ್ನು ಹೊರಗೆ ಹಾಕಿದರೆಂದು ಯೇಸು ಕೇಳಿ ಅವನನ್ನು ಕಂಡುಕೊಂಡು - ನೀನು ಮನುಷ್ಯಕುಮಾರನನ್ನು ನಂಬುತ್ತೀಯೋ ಎಂದು ಕೇಳಿದನು.
Kannada Bible (KNCL) BSI 2016
ಹುಟ್ಟುಕುರುಡನನ್ನು ಹೊರಗೆ ತಳ್ಳಿದ ವಾರ್ತೆ ಯೇಸು ಸ್ವಾಮಿಯ ಕಿವಿಗೆ ಮುಟ್ಟಿತು. ಯೇಸು ಅವನನ್ನು ಕಂಡು, “ನರಪುತ್ರನಲ್ಲಿ ನಿನಗೆ ವಿಶ್ವಾಸವಿದೆಯೇ?’ ಎಂದು ಕೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದಿ ನಾಯಕರು ಅವನನ್ನು ಸಭಾಮಂದಿರದಿಂದ ಹೊರಗೆ ಹಾಕಿದ್ದನ್ನು ಯೇಸು ಕೇಳಿ, ಅವನನ್ನು ಕಂಡು, “ನೀನು ಮನುಷ್ಯಪುತ್ರನನ್ನು ನಂಬುತ್ತೀಯಾ?” ಎಂದರು.