John 9:39 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು, “ಈ ಲೋಕಕ್ಕೆ ತೀರ್ಪಾಗಲೆಂದು ನಾನು ಈ ಲೋಕಕ್ಕೆ ಬಂದೆನು. ಕುರುಡರು ಕಾಣುವಂತಾಗಲೆಂದೂ ಕಣ್ಣುಳ್ಳವರು ಕುರುಡರಾಗಲೆಂದೂ ನಾನು ಬಂದೆನು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೇಸುವು, “ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ. ಆ ತೀರ್ಪು ಏನೆಂದರೆ ಕುರುಡರು ನೋಡುವರು, ದೃಷ್ಟಿ ಇರುವವರು ಕುರುಡರಾಗುವರು” ಎಂದನು.
Kannada BSI Bible 2016
ಯೇಸು--ನೋಡದವರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನ್ಯಾಯತೀರ್ಪಿಗೋಸ್ಕರ ನಾನು ಈ ಲೋಕಕ್ಕೆ ಬಂದಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೇಸು - ನಾನು ನ್ಯಾಯತೀರ್ಪಿಗಾಗಿ ಈ ಲೋಕಕ್ಕೆ ಬಂದಿದ್ದೇನೆ; ಆ ತೀರ್ಪು ಏನಂದರೆ, ಕಣ್ಣಿಲ್ಲದವರಿಗೆ ಕಣ್ಣುಬರುವವು. ಕಣ್ಣಿದ್ದವರು ಕುರುಡರಾಗುವರು ಅಂದನು.
Kannada Bible (KNCL) BSI 2016
ಆಗ ಯೇಸು, “ಕುರುಡರು ಕಾಣುವಂತೆಯೂ ಕಾಣುವವರು ಕುರುಡರಾಗುವಂತೆಯೂ ತೀರ್ಪುಕೊಡಲೆಂದೇ ನಾನು ಈ ಲೋಕಕ್ಕೆ ಬಂದುದು,” ಎಂದು ನುಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೇಸು, “ಕುರುಡರು ನೋಡುವಂತೆಯೂ ನೋಡುವವರು ಕುರುಡರಾಗುವಂತೆಯೂ ನಾನು ನ್ಯಾಯತೀರ್ಪು ಮಾಡುವುದಕ್ಕಾಗಿ ಈ ಲೋಕಕ್ಕೆ ಬಂದಿದ್ದೇನೆ,” ಎಂದರು.