John 9:41 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸು, “ನೀವು ನಿಜವಾಗಿಯೂ ಕುರುಡರಾಗಿದ್ದರೆ ಪಾಪವೆಂಬ ಅಪರಾಧಕ್ಕೆ ಗುರಿಯಾಗುತ್ತಿರಲಿಲ್ಲ. ಆದರೆ ನೀವು, ‘ನಮಗೆ ಕಣ್ಣು ಕಾಣುತ್ತದೆ’ ಎಂದು ಹೇಳುತ್ತೀರಿ. ಆದ್ದರಿಂದ ನೀವು ಪಾಪಿಗಳೇ ಆಗಿದ್ದೀರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ ‘ನಿಮಗೆ ಕಣ್ಣುಕಾಣುತ್ತವೆ’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪ ನಿಮಗೆ ಉಳಿದಿದೆ” ಎಂದನು.
Kannada BSI Bible 2016
ಅದಕ್ಕೆ ಯೇಸು ಅವರಿಗೆ--ನೀವು ಕುರುಡರಾಗಿದ್ದರೆ ನಿಮ್ಮಲ್ಲಿ ಪಾಪವು ಇರುತ್ತಿರ ಲಿಲ್ಲ. ಆದರೆ--ನಾವು ನೋಡುತ್ತೇವೆಂದು ನೀವು ಹೇಳುವದರಿಂದ ನಿಮ್ಮ ಪಾಪವು ಉಳಿದದೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯೇಸು ಅವರಿಗೆ - ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ; ನಮಗೆ ಕಣ್ಣು ಕಾಣುತ್ತವೆ ಅನ್ನುತ್ತೀರಾದ್ದರಿಂದ ನಿಮ್ಮ ಪಾಪವು ಉಳಿದದೆ.
Kannada Bible (KNCL) BSI 2016
ಯೇಸು, “ನೀವು ಕುರುಡರೇ ಆಗಿದ್ದರೆ ಪಾಪಿಗಳಾಗುತ್ತಿರಲಿಲ್ಲ. ಆದರೆ, ‘ನಮಗೆ ಕಣ್ಣು ಕಾಣುತ್ತದೆ,’ ಎಂದು ಹೇಳಿಕೊಳ್ಳುತ್ತೀರಿ; ಆದ್ದರಿಂದ ನೀವು ಪಾಪಿಗಳಾಗಿದ್ದೀರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದಕ್ಕೆ ಯೇಸು ಅವರಿಗೆ, “ನೀವು ಕುರುಡರಾಗಿದ್ದರೆ ನಿಮಗೆ ಪಾಪವು ಇರುತ್ತಿರಲಿಲ್ಲ. ಆದರೆ, ‘ನಮಗೆ ಕಾಣುತ್ತದೆ,’ ಎಂದು ನೀವು ಹೇಳುವುದರಿಂದ ನಿಮ್ಮ ಪಾಪವು ನಿಮಗೆ ಉಳಿದಿದೆ,” ಎಂದರು.