John 9:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸು ಆ ಮನುಷ್ಯನಿಗೆ, “ಹೋಗಿ ಸಿಲೋವ ಕೊಳದಲ್ಲಿ (ಸಿಲೋವ ಅಂದರೆ “ಕಳುಹಿಸಲ್ಪಟ್ಟವನು.”) ತೊಳೆದುಕೊ” ಎಂದು ಹೇಳಿದನು. ಅಂತೆಯೇ ಅವನು ಹೋಗಿ ತೊಳೆದುಕೊಂಡನು. ಆ ಕೂಡಲೇ ಅವನಿಗೆ ದೃಷ್ಟಿಬಂದಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಅವನಿಗೆ, “ನೀನು ಹೋಗಿ ಸಿಲೋವ (ಸಿಲೋವ ಎಂದರೆ ‘ಕಳುಹಿಸಲ್ಪಟ್ಟವನು’ ಎಂದರ್ಥ) ಕೊಳದಲ್ಲಿ ತೊಳೆದುಕೋ” ಎಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
Kannada BSI Bible 2016
ಅವನಿಗೆ--ಹೋಗು, ಸಿಲೋವ ಕೊಳ ದಲ್ಲಿ ತೊಳೆದುಕೋ(ಸಿಲೋವ ಅಂದರೆ ಕಳುಹಿಸಲ್ಪಟ್ಟ ವನು ಎಂದರ್ಥ) ಅಂದನು. ಅವನು ಹೋಗಿ ತೊಳೆದುಕೊಂಡು ದೃಷ್ಟಿಯುಳ್ಳವನಾಗಿ ಬಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಸಿಲೋವ ಕೊಳಕ್ಕೆ ಹೋಗಿ ತೊಳಕೋ ಅಂದನು. (ಸಿಲೋವ ಎಂಬ ಮಾತಿಗೆ ಕಳುಹಿಸಲ್ಪಟ್ಟವನು ಎಂದರ್ಥ.) ಅವನು ಹೋಗಿ ತೊಳಕೊಂಡು ಕಣ್ಣು ಹೊಂದಿದವನಾಗಿ ಬಂದನು.
Kannada Bible (KNCL) BSI 2016
(’ಶಿಲೋವಾಮ್’ ಎಂದರೆ ಕಳುಹಿಸಲಾದವನು ಎಂದರ್ಥ). ಅದರಂತೆಯೇ ಆ ಕುರುಡನು ಹೋಗಿ ಕಣ್ಣುಗಳನ್ನು ತೊಳೆದುಕೊಂಡನು; ಹಿಂದಿರುಗಿದಾಗ ಅವನಿಗೆ ಕಣ್ಣು ಬಂದಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನಿಗೆ, “ಹೋಗು, ಸಿಲೋವ ಕೊಳದಲ್ಲಿ ತೊಳೆದುಕೋ,” ಎಂದರು. ಸಿಲೋವ ಎಂದರೆ, “ಕಳುಹಿಸಲಾದವನು” ಎಂದರ್ಥ. ಕುರುಡನು ಹೋಗಿ ಕಣ್ಣು ತೊಳೆದುಕೊಂಡು ದೃಷ್ಟಿಹೊಂದಿದವನಾಗಿ ಬಂದನು.