John 9:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಮನುಷ್ಯನು ಮೊದಲು ಭಿಕ್ಷೆ ಬೇಡುತ್ತಿದ್ದುದನ್ನು ನೋಡಿದ್ದ ಕೆಲವರು ಮತ್ತು ಅವನ ನೆರೆಯವರು, “ನೋಡಿ! ಯಾವಾಗಲೂ ಭಿಕ್ಷೆ ಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ” ಎಂದು ವಿಚಾರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನೆರೆಹೊರೆಯವರು ಅವನು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ನೋಡಿದ್ದವರೂ, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೇ?” ಎಂದು ವಿಚಾರಿಸಿದರು.
Kannada BSI Bible 2016
ಹೀಗಿರುವದರಿಂದ ನೆರೆಯವರೂ ಅವನು ಮೊದಲು ಕುರುಡನಾಗಿದ್ದಾಗ ಅವನನ್ನು ನೋಡಿದವರೂ-- ಕೂತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೋ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನೆರೆಹೊರೆಯವರೂ ಅವನು ಭಿಕ್ಷಗಾರನಾಗಿದ್ದದ್ದನ್ನು ಮೊದಲು ನೋಡಿದವರೂ - ಇವನು ಕೂತಿದ್ದ ಆ ಭಿಕ್ಷುಕನಲ್ಲವೇ ಅಂದರು.
Kannada Bible (KNCL) BSI 2016
ಅವನ ನೆರೆಯವರು ಮತ್ತು ಹಿಂದೆ ಅವನು ಭಿಕ್ಷೆಬೇಡುತ್ತಿದ್ದಾಗ ಅವನನ್ನು ನೋಡಿದ್ದವರು, “ಭಿಕ್ಷೆಬೇಡುತ್ತಾ ಕುಳಿತುಕೊಂಡಿದ್ದವನು ಇವನೇ ಅಲ್ಲವೆ?” ಎಂದು ವಿಚಾರಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನೆರೆಯವರು ಮತ್ತು ಮೊದಲು ಭಿಕ್ಷುಕನಾಗಿದ್ದಾಗ ಅವನನ್ನು ಕಂಡವರು, “ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದವನು ಇವನೇ ಅಲ್ಲವೇ?” ಎಂದರು.