Jonah 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನನು, “ಈ ಬಿರುಗಾಳಿಗೆ ನಾನೇ ಕಾರಣ. ಈಗ ನನ್ನನ್ನೆತ್ತಿ ಸಮುದ್ರದೊಳಗೆ ಬಿಸಾಡಿರಿ. ಆಗ ಸಮುದ್ರವು ಶಾಂತವಾಗುವುದು” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯೋನನು ಅವರಿಗೆ “ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ಆಗ ಸಮುದ್ರವು ಶಾಂತವಾಗುವುದು; ಈ ಭೀಕರ ಬಿರುಗಾಳಿ ನಿಮಗೆ ಸಂಭವಿಸಿದ್ದು ನನ್ನ ನಿಮಿತ್ತವೇ ಎಂಬುದು ನನಗೆ ಗೊತ್ತು” ಎಂದು ಉತ್ತರಕೊಟ್ಟನು.
Kannada BSI Bible 2016
ಅವನು ಅವ ರಿಗೆ--ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ನಿಮಗೆ ಶಾಂತವಾಗುವದು; ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ ನಿಮ್ಮ ಮೇಲೆ ಬಂತೆಂದು ಬಲ್ಲೆನು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನೆತ್ತಿ ಸಮುದ್ರದಲ್ಲಿ ಹಾಕಿರಿ; ನಿಮ್ಮ ಮೇಲೆ ಎದ್ದಿರುವ ಸಮುದ್ರವು ಶಾಂತವಾಗುವದು; ಈ ದೊಡ್ಡ ತುಫಾನು ನಿಮಗೆ ಸಂಭವಿಸಿದ್ದು ನನ್ನ ನಿವಿುತ್ತವೇ ಎಂಬದು ನನಗೆ ಗೊತ್ತು ಎಂದುತ್ತರಕೊಟ್ಟನು.
Kannada Bible (KNCL) BSI 2016
ಯೋನನು: “ನನ್ನನ್ನು ಎತ್ತಿ ಸಮುದ್ರಕ್ಕೆ ಎಸೆಯಿರಿ. ಆಗ ಅದು ಶಾಂತವಾಗುವುದು. ನೀವು ಇಂಥ ಭೀಕರ ಬಿರುಗಾಳಿಗೆ ತುತ್ತಾಗಲು ನಾನೇ ಕಾರಣ. ಇದನ್ನು ನಾನು ಚೆನ್ನಾಗಿ ಬಲ್ಲೆ,” ಎಂದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವರಿಗೆ, “ನನ್ನನ್ನು ಎತ್ತಿ ಸಮುದ್ರದಲ್ಲಿ ಹಾಕಿರಿ, ಆಗ ಸಮುದ್ರವು ಶಾಂತವಾಗುವುದು. ಏಕೆಂದರೆ ನನ್ನ ನಿಮಿತ್ತ ಈ ದೊಡ್ಡ ಬಿರುಗಾಳಿ, ನಿಮ್ಮ ಮೇಲೆ ಬಂತೆಂದು ಬಲ್ಲೆನು,” ಎಂದನು.