Jonah 1:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಅವರಿಗೆ ಯೋನನನ್ನು ಸಮುದ್ರಕ್ಕೆ ಬಿಸಾಡಲು ಮನಸ್ಸಿಲ್ಲದೆ ಹೋಯಿತು. ಅವರು ಹಡಗನ್ನು ದಡಕ್ಕೆ ನಡೆಸಿಕೊಂಡು ಹೋಗಲು ಪ್ರಯತ್ನಪಟ್ಟರು. ಆದರೆ ಅವರಿಂದ ಸಾಧ್ಯವಾಗಲಿಲ್ಲ. ಬಿರುಗಾಳಿಯೂ ಸಮುದ್ರದ ತೆರೆಗಳೂ ಹೆಚ್ಚೆಚ್ಚಾಗಿ ಬಲವಾಗುತ್ತಾ ಬಂದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವಿಕರು ಅದಕ್ಕೆ ಒಪ್ಪದೆ ದಡಕ್ಕೆ ಹಿಂತಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸಹ ದಡ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.
Kannada BSI Bible 2016
ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟು ಹಾಕಿದರು; ಆದರೆ ಅವರಿಂದಾಗದೆ ಹೋಯಿತು. ಸಮುದ್ರವು ಅವರಿಗೆ ಎದುರಾಗಿ ಹೆಚ್ಚೆಚ್ಚಾಗಿ ಉಬ್ಬುತ್ತಾ ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವಿಕರು ಒಪ್ಪದೆ ದಡಕ್ಕೆ ಹಿಂದಿರುಗಬೇಕೆಂದು ಹುಟ್ಟುಹಾಕುತ್ತಾ ಬಂದರೂ ಸೇರಲು ಆಗಲಿಲ್ಲ; ಸಮುದ್ರವು ಇನ್ನೂ ಅಲ್ಲಕಲ್ಲೋಲವಾಗಿ ಅವರನ್ನು ಎದುರಿಸಿತು.
Kannada Bible (KNCL) BSI 2016
ನಾವಿಕರು ಅವನ ಸಲಹೆಗೆ ಒಪ್ಪದೆ, ಹಡಗನ್ನು ದಡಕ್ಕೆ ಸಾಗಿಸಲು ತಮ್ಮ ಶಕ್ತಿಸಾಮರ್ಥ್ಯವನ್ನೆಲ್ಲ ಪ್ರಯೋಗಿಸಿ ಹುಟ್ಟುಹಾಕಿದರು. ಆದರೆ ಸಾಧ್ಯವಾಗಲಿಲ್ಲ. ಸಮುದ್ರವು ಅಲ್ಲೋಲಕಲ್ಲೋಲವಾಗುತ್ತಲೇ ಇತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೂ ಆ ಮನುಷ್ಯರು ದಡಕ್ಕೆ ತಿರುಗಿಕೊಳ್ಳುವ ಹಾಗೆ ಬಲವಾಗಿ ಹುಟ್ಟುಹಾಕಿದರು. ಆದರೆ ಅವರಿಂದಾಗದೆ ಹೋಯಿತು. ಏಕೆಂದರೆ ಸಮುದ್ರವು ಅವರಿಗೆ ಎದುರಾಗಿ, ಹೆಚ್ಚೆಚ್ಚಾಗಿ ತೆರೆಗಳಿಂದ ರೋಷಗೊಂಡಿತು.