Jonah 1:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಆ ಜನರು ಯೆಹೋವನಿಗೆ, “ಯೆಹೋವನೇ, ಈ ಮನುಷ್ಯನು ಕೆಟ್ಟಕಾರ್ಯ ಮಾಡಿದ್ದರಿಂದ ನಾವು ಇವನನ್ನು ಸಮುದ್ರಕ್ಕೆ ಬಿಸಾಡುತ್ತೇವೆ. ನಾವು ಒಬ್ಬ ನಿರಪರಾಧಿಯನ್ನು ಕೊಂದೆವು ಎಂಬ ಅಪರಾಧವನ್ನು ನಮ್ಮ ಮೇಲೆ ಹೊರಿಸಬೇಡ. ಅವನನ್ನು ಕೊಂದದ್ದಕ್ಕಾಗಿ ನಮ್ಮನ್ನು ಕೊಲ್ಲಬೇಡ. ನೀನು ಯೆಹೋವನೆಂದು ನಮಗೆ ಗೊತ್ತಿದೆ. ನಿನಗೆ ಇಷ್ಟಬಂದದ್ದನ್ನು ನೀನು ನೆರವೇರಿಸುವೆ. ಆದ್ದರಿಂದ ದಯವಿಟ್ಟು ನಮಗೆ ಕರುಣೆ ತೋರಿಸು” ಅಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು, ಅವರು ಸಹ ಯೆಹೋವನಿಗೆ ಮೊರೆಯಿಟ್ಟು, “ಯೆಹೋವನೇ, ಈ ಮನುಷ್ಯನ ಪ್ರಾಣನಷ್ಟದಿಂದ ಆಗುವ ಕೇಡು ನಮ್ಮ ಮೇಲೆ ಬಾರದಿರಲಿ; ನಿರಪರಾಧಿಯನ್ನು ಕೊಂದ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ; ಯೆಹೋವನೇ, ನೀನೇ ನಿನ್ನ ಚಿತ್ತಾನುಸಾರವಾಗಿ ಇದನ್ನು ಮಾಡಿದ್ದಿಯಲ್ಲಾ” ಎಂದು ಬಿನ್ನವಿಸಿದರು.
Kannada BSI Bible 2016
ಆದದರಿಂದ ಅವರು ಕರ್ತನಿಗೆ ಕೂಗಿ ಹೇಳಿದ್ದೇನಂದರೆ--ಓ ಕರ್ತನೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ; ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡ; ಓ ಕರ್ತನೇ, ನೀನು ನಿನ್ನ ಚಿತ್ತಕ್ಕೆ ಬಂದ ಹಾಗೆ ಮಾಡಿದ್ದೀ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಅವರು ಯೆಹೋವನಿಗೆ ಮೊರೆಯಿಟ್ಟು - ಯೆಹೋವನೇ, ಲಾಲಿಸು, ಲಾಲಿಸು; ಈ ಮನುಷ್ಯನ ಪ್ರಾಣನಷ್ಟಕ್ಕಾಗಿ ನಾಶನವು ನಮಗೆ ಬಾರದಿರಲಿ; ನಿರಪರಾಧಿಯನ್ನು ಕೊಲ್ಲುವ ದೋಷಕ್ಕೆ ನಮ್ಮನ್ನು ಗುರಿಮಾಡಬೇಡ;
Kannada Bible (KNCL) BSI 2016
ಆಗ ಅವರು ಬೇರೆ ದಿಕ್ಕುತೋಚದೆ ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತಾ: “ಸ್ವಾಮಿ, ಈ ನಿರಪರಾಧಿಯ ಪ್ರಾಣಹಾನಿಗೆ ನಾವು ಹೊಣೆಯಲ್ಲ. ಇದಕ್ಕಾಗಿ ನಮ್ಮನ್ನು ನಾಶಮಾಡಬೇಡಿ. ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?’ ಎಂದು ದೈನ್ಯದಿಂದ ಪ್ರಾರ್ಥಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಯೆಹೋವ ದೇವರಿಗೆ ಕೂಗಿ, “ಯೆಹೋವ ದೇವರೇ, ನಾವು ಈ ಮನುಷ್ಯನ ಜೀವದ ನಿಮಿತ್ತ ನಾಶವಾಗದಿರಲಿ. ಅಪರಾಧವಿಲ್ಲದ ರಕ್ತವನ್ನು ನಮ್ಮ ಮೇಲೆ ಹೊರಿಸಬೇಡಿರಿ. ಯೆಹೋವ ದೇವರೇ, ಇದೆಲ್ಲವೂ ಸಂಭವಿಸಿರುವುದು ನಿಮ್ಮ ಚಿತ್ತವಲ್ಲವೇ?” ಎಂದು ಹೇಳಿದರು.