Jonah 1:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ಇದನ್ನು ನೋಡಿದಾಗ ಅವರು ಯೆಹೋವನಿಗೆ ಭಯಪಟ್ಟು ಗೌರವಿಸಿದರು. ಅವರು ಆತನಿಗೆ ಯಜ್ಞವನ್ನರ್ಪಿಸಿ ಹರಕೆ ಹಾಕಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳವಾಗಿ ಭಯಪಟ್ಟು, ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.
Kannada BSI Bible 2016
ಆ ಮನುಷ್ಯರು ಯೆಹೋವನಿಗೆ ಬಹಳ ವಾಗಿ ಭಯಪಟ್ಟು ಕರ್ತನಿಗೆ ಬಲಿ ಅರ್ಪಿಸಿ ಪ್ರಮಾಣ ಗಳನ್ನು ಮಾಡಿಕೊಂಡರು.ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದನ್ನು ನೋಡಿ ಆ ಜನರು ಯೆಹೋವನಿಗೆ ಬಹಳ ಭಯಪಟ್ಟು ಆತನಿಗೆ ಯಜ್ಞವನ್ನರ್ಪಿಸಿ ಹರಕೆಗಳನ್ನು ಮಾಡಿಕೊಂಡರು.
Kannada Bible (KNCL) BSI 2016
ಇದನ್ನು ಕಂಡು ಜನರು ಸರ್ವೇಶ್ವರಸ್ವಾಮಿಗೆ ಬಹುವಾಗಿ ಭಯಪಟ್ಟರು; ಯಜ್ಞವನ್ನು ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಆ ಜನರು, ಯೆಹೋವ ದೇವರಿಗೆ ಬಹಳವಾಗಿ ಭಯಪಟ್ಟು, ಅವರಿಗೆ ಬಲಿ ಅರ್ಪಿಸಿ, ಹರಕೆಗಳನ್ನು ಸಲ್ಲಿಸಿದರು.