Jonah 1:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋನನು ಸಮುದ್ರದೊಳಗೆ ಬಿದ್ದಾಗ, ಅವನನ್ನು ನುಂಗಿಬಿಡಲು ಯೆಹೋವನು ಒಂದು ದೊಡ್ಡ ಮೀನಿಗೆ ಆಜ್ಞಾಪಿಸಿದನು. ಯೋನನು ಆ ಮೀನಿನ ಹೊಟ್ಟೆಯೊಳಗೆ ಮೂರು ಹಗಲು ಮೂರು ರಾತ್ರಿ ಇದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೆಹೋವನು, ಯೋನನನ್ನು ನುಂಗಲು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನಗಳ ಕಾಲ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.
Kannada BSI Bible 2016
ಆದರೆ ಕರ್ತನು ಯೋನನನ್ನು ನುಂಗುವ ಹಾಗೆ ದೊಡ್ಡ ವಿಾನನ್ನು ಸಿದ್ಧಮಾಡಿದ್ದನು; ಯೋನನು ಆ ವಿಾನಿನ ಹೊಟ್ಟೆಯಲ್ಲಿ ಮೂರು ಹಗಲು ಮೂರು ರಾತ್ರಿಯು ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇತ್ತ ಯೋನನನ್ನು ನುಂಗಲು ಯೆಹೋವನು ಒಂದು ದೊಡ್ಡ ಮೀನಿಗೆ ಅಪ್ಪಣೆ ಮಾಡಿದನು; ಯೋನನು ಮೂರು ದಿನ ಹಗಲಿರುಳು ಆ ಮೀನಿನ ಹೊಟ್ಟೆಯೊಳಗೆ ಇದ್ದನು.
Kannada Bible (KNCL) BSI 2016
ಇತ್ತ ಸರ್ವೇಶ್ವರಸ್ವಾಮಿಯ ಆಜ್ಞಾನುಸಾರ ದೊಡ್ಡ ಮೀನೊಂದು ಬಂದು ಯೋನನನ್ನು ನುಂಗಿತು. ಅವನು ಅದರ ಹೊಟ್ಟೆಯಲ್ಲಿ ಮೂರು ಹಗಲು, ಮೂರು ಇರುಳು ಇದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೋವ ದೇವರು ಯೋನನನ್ನು ನುಂಗುವಂತೆ ದೊಡ್ಡ ಮೀನನ್ನು ಸಿದ್ಧಮಾಡಿದ್ದರು. ಯೋನನು ಆ ಮೀನಿನ ಹೊಟ್ಟೆಯಲ್ಲಿ ಮೂರು ಹಗಲು ಮತ್ತು ಮೂರು ರಾತ್ರಿ ಇದ್ದನು.