Jonah 1:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಿನೆವೆಯು ಮಹಾದೊಡ್ಡ ನಗರ. ಅಲ್ಲಿಯ ಜನರ ಅನೇಕ ತರದ ದುಷ್ಕೃತ್ಯಗಳನ್ನು ನೋಡಿದ್ದೇನೆ. ಆದ್ದರಿಂದ ನೀನು ಆ ನಗರಕ್ಕೆ ಹೋಗಿ ಅಲ್ಲಿಯ ಜನರಿಗೆ ದುಷ್ಟತನವನ್ನು ನಿಲ್ಲಿಸಿರಿ ಎಂದು ಹೇಳು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನೀನು ಇಲ್ಲಿಂದ ಹೊರಟು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದನ್ನು ಕಟುವಾಗಿ ಖಂಡಿಸಿ ಹೇಳು, ಏಕೆಂದರೆ ಅಲ್ಲಿರುವ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ” ಎಂದು ಅಪ್ಪಣೆಮಾಡಿದನು.
Kannada BSI Bible 2016
ಹೇಗಂದರೆ--ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಕೂಗು; ಅವರ ಕೆಟ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂಬದು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಗಟ್ಟಿಯಾಗಿ ಕೂಗುತ್ತಾ ಅದನ್ನು ಖಂಡಿಸು; ಅದರ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂದು ಅಪ್ಪಣೆಮಾಡಿದನು.
Kannada Bible (KNCL) BSI 2016
“ನಿನೆವೆ ಮಹಾನಗರದ ನಿವಾಸಿಗಳು ಎಷ್ಟು ದುಷ್ಟರೆಂಬುದು ನನಗೆ ತಿಳಿದುಬಂದಿದೆ. ನೀನು ಅಲ್ಲಿಗೆ ಹೋಗು ಅವರನ್ನು ಕಟುವಾಗಿ ಖಂಡಿಸು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನೀನು ಎದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಅದಕ್ಕೆ ವಿರೋಧವಾಗಿ ಪ್ರಸಂಗಿಸು, ಏಕೆಂದರೆ ಅವರ ಕೆಟ್ಟತನವು ನನ್ನ ಮುಂದೆ ಏರಿ ಬಂದಿದೆ,” ಎಂಬುದು.