Jonah 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಡಗು ಮುಳುಗಿಹೋಗದಂತೆ ಅದನ್ನು ಹಗುರ ಮಾಡಲು ಜನರು ಅದರೊಳಗಿದ್ದ ವಸ್ತುಗಳನ್ನು ಸಮುದ್ರಕ್ಕೆ ಎಸೆದರು. ನಾವಿಕರು ತುಂಬಾ ಭಯಪಟ್ಟಿದ್ದರು. ಪ್ರತಿಯೊಬ್ಬರು ತಮ್ಮತಮ್ಮ ದೇವರುಗಳಿಗೆ ಪ್ರಾರ್ಥನೆ ಮಾಡಿದರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಅಲ್ಲಿ ಮಲಗಿ ನಿದ್ರೆ ಮಾಡತೊಡಗಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾವಿಕರು ಹೆದರಿ ತಮ್ಮತಮ್ಮ ದೇವರುಗಳಿಗೆ ಮೊರೆಯಿಟ್ಟರು. ಹಡಗನ್ನು ಹಗುರ ಮಾಡಲು ಹಡಗಿನಲ್ಲಿರುವ ಸರಕುಗಳನ್ನು ಸಮುದ್ರಕ್ಕೆ ಬಿಸಾಡಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಹೋಗಿ ಮಲಗಿ ಗಾಢನಿದ್ರೆ ಮಾಡುತ್ತಿದ್ದನು.
Kannada BSI Bible 2016
ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸಾಮಾನುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು; ಆದರೆ ಯೋನನು ಹಡಗಿನ ಒಳಗೆ ಇಳಿದುಹೋಗಿ ಮಲಗಿಕೊಂಡು ಗಾಢ ನಿದ್ರೆಯಲ್ಲಿ ದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾವಿಕರು ಹೆದರಿ ತಮ್ಮ ತಮ್ಮ ದೇವರುಗಳಿಗೆ ಮೊರೆಯಿಟ್ಟು ತಮ್ಮ ಕಷ್ಟವು ಕಡಿಮೆಯಾಗುವ ಹಾಗೆ ಹಡಗಿನ ಸಾಮಾನುಗಳನ್ನು ಸಮುದ್ರಕ್ಕೆ ಬಿಸಾಟುಬಿಟ್ಟರು. ಇಷ್ಟರೊಳಗೆ ಯೋನನು ಹಡಗಿನ ಒಳಭಾಗಕ್ಕೆ ಇಳಿದು ಮಲಗಿಕೊಂಡಿದ್ದನು; ಗಾಢನಿದ್ರೆ ಹತ್ತಿತ್ತು.
Kannada Bible (KNCL) BSI 2016
ಇಷ್ಟರೊಳಗೆ ಯೋನನು ಹಡಗಿನ ತಳಭಾಗಕ್ಕೆ ಇಳಿದುಹೋಗಿ ಹಾಯಾಗಿ ಮಲಗಿದ್ದನು. ಅವನಿಗೆ ಗಾಢನಿದ್ರೆ ಹತ್ತಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಹಡಗಿನವರು ಭಯಪಟ್ಟು ಒಬ್ಬೊಬ್ಬನು ತನ್ನ ತನ್ನ ದೇವರಿಗೆ ಕೂಗಿ, ಹಡಗನ್ನು ಹಗುರ ಮಾಡುವ ಹಾಗೆ ಅದರಲ್ಲಿದ್ದ ಸರಕುಗಳನ್ನು ಸಮುದ್ರದಲ್ಲಿ ಹಾಕಿಬಿಟ್ಟರು. ಆದರೆ ಯೋನನು ಹಡಗಿನ ಕೆಳಭಾಗಕ್ಕೆ ಇಳಿದು ಹೋಗಿ, ಮಲಗಿಕೊಂಡು ಗಾಢ ನಿದ್ರೆಯಲ್ಲಿದ್ದನು.