Jonah 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಪ್ರಯಾಣಿಕರು, “ಯಾರ ನಿಮಿತ್ತ ನಮಗೆ ಈ ಆಪತ್ತು ಬಂತೆಂದು ತಿಳಿದುಕೊಳ್ಳಲು ಚೀಟು ಹಾಕೋಣ” ಅಂದರು. ಅವರು ಚೀಟು ಹಾಕಿದಾಗ ಆ ಚೀಟು ಯೋನನಿಗೆ ಬಂದಿತು; ಅವನೇ ಅವರ ಸಂಕಟಗಳಿಗೆ ಕಾರಣನೆಂಬುದು ನಿಶ್ಚಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅನಂತರ ನಾವಿಕರೆಲ್ಲರು “ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣರೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ” ಎಂಬುದಾಗಿ ಮಾತನಾಡಿಕೊಂಡು ಚೀಟುಹಾಕಲು ಚೀಟು ಯೋನನ ಹೆಸರಿಗೆ ಬಂದಿತು.
Kannada BSI Bible 2016
ಇದಲ್ಲದೆ ಅವರು ಒಬ್ಬರಿಗೊ ಬ್ಬರು--ಬನ್ನಿ, ಚೀಟುಗಳನ್ನು ಹಾಕೋಣ; ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟು ಗಳನ್ನು ಹಾಕಿದಾಗ ಯೋನನ ಮೇಲೆ ಚೀಟು ಬಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅನಂತರ ನಾವಿಕರೆಲ್ಲರು - ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣವೆಂದು ನಮಗೆ ತಿಳಿಯುವ ಹಾಗೆ ಚೀಟು ಹಾಕೋಣ ಬನ್ನಿರಿ ಎಂಬದಾಗಿ ಮಾತಾಡಿಕೊಂಡು ಚೀಟುಹಾಕಲು ಚೀಟು ಯೋನನಿಗೆ ಬಂತು.
Kannada Bible (KNCL) BSI 2016
ಆಗ ನಾವಿಕರು: “ನಮಗೆ ಸಂಭವಿಸಿರುವ ಈ ದುರಂತಕ್ಕೆ ಕಾರಣ ಯಾರಿರಬಹುದು? ಬನ್ನಿ, ಚೀಟುಹಾಕಿ ನೋಡೋಣ” ಎಂದು ತಮ್ಮ ತಮ್ಮಲ್ಲೇ ಮಾತನಾಡಿಕೊಂಡರು. ಹಾಗೆ ಮಾಡಿದಾಗ ಚೀಟು ಯೋನನ ಹೆಸರಿಗೆ ಬಂತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾವಿಕರು ಒಬ್ಬರಿಗೊಬ್ಬರು, “ಬನ್ನಿ, ಚೀಟುಗಳನ್ನು ಹಾಕೋಣ. ಯಾವನ ನಿಮಿತ್ತ ಈ ಕೇಡು ನಮಗೆ ಬಂತೋ ತಿಳಿಯೋಣ,” ಎಂದು ಹೇಳಿಕೊಂಡರು. ಹಾಗೆಯೇ ಅವರು ಚೀಟುಗಳನ್ನು ಹಾಕಿದಾಗ, ಯೋನನ ಮೇಲೆ ಚೀಟು ಬಿತ್ತು.