Jonah 1:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವರು ಯೋನನಿಗೆ, “ನೋಡು, ನಿನ್ನಿಂದಾಗಿ ನಮಗೆ ಈ ಸಂಕಟ ಬಂದಿದೆ. ನೀನು ಏನು ಮಾಡಿದಿ ಎಂದು ನಮಗೆ ಹೇಳು. ನಿನ್ನ ಕೆಲಸವೇನು? ನೀನು ಎಲ್ಲಿಂದ ಬಂದಿ? ನಿನ್ನ ದೇಶ ಯಾವುದು? ನಿನ್ನ ಜನರು ಯಾರು?” ಎಂದೆಲ್ಲಾ ವಿಚಾರಿಸಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವರು ಯೋನನಿಗೆ ಅಯ್ಯಾ, “ಈ ಕೇಡು ನಮಗೆ ಸಂಭವಿಸಲು ಕಾರಣವೇನು ಎಂಬುದನ್ನು ನೀನೇ ನಮಗೆ ತಿಳಿಸು; ನಿನ್ನ ವೃತ್ತಿ ಏನು? ನೀನು ಎಲ್ಲಿಂದ ಬಂದವನು? ನೀನು ಯಾವ ದೇಶದವನು?, ಯಾವ ಜನಾಂಗದವನು?” ಎಂದು ಅವನನ್ನು ಕೇಳಲು
Kannada BSI Bible 2016
ಆಗ ಅವರು ಅವನಿಗೆ--ಯಾವದರ ನಿಮಿತ್ತ ಈ ಕೇಡು ನಮಗೆ ಬಂತು, ನಿನ್ನ ಕೆಲಸವೇನು, ಎಲ್ಲಿಂದ ಬಂದಿ,
Kannada BSI JV (ಕನ್ನಡ ಸತ್ಯವೇದವು J.V. (BSI))
ಅದನ್ನು ನೋಡಿ ಅವರು - ಅಯ್ಯಾ, ಈ ಕೇಡು ನಮಗೆ ಸಂಭವಿಸಿದ್ದಕ್ಕೆ ಯಾರು ಕಾರಣ ಎಂಬದನ್ನು ನೀನೇ ನಮಗೆ ತಿಳಿಸು; ನೀನು ಎಲ್ಲಿಂದ ಯಾವ ಕೆಲಸದ ಮೇಲೆ ಬಂದಿ, ನೀನು ಯಾವ ದೇಶದವನು, ಯಾವ ಜನಾಂಗದವನು ಎಂದು ಅವನನ್ನು ಕೇಳಲು ಅವನು ಅವರಿಗೆ - ನಾನು ಇಬ್ರಿಯನು;
Kannada Bible (KNCL) BSI 2016
ಆಗ ನಾವಿಕರು: “ನೀನು ಯಾರು? ಎಲ್ಲಿಂದ ಬಂದೆ? ಯಾವ ಕೆಲಸದ ಮೇಲೆ ಬಂದೆ? ನೀನು ಯಾವ ಜನಾಂಗದವನು? ಈ ದುರಂತಕ್ಕೆ ಕಾರಣ ಯಾರು?” ಎಂದು ಪ್ರಶ್ನಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಅವನಿಗೆ, “ನಮಗಾಗಿ ಈ ಕಷ್ಟವನ್ನೆಲ್ಲಾ ಉಂಟುಮಾಡಿದ್ದಕ್ಕೆ ಯಾರು ಜವಾಬ್ದಾರರೆಂದು ನಮಗೆ ತೋರಿಸು. ನಿನ್ನ ಕೆಲಸವೇನು? ಎಲ್ಲಿಂದ ಬಂದೆ? ನಿನ್ನ ದೇಶ ಯಾವುದು? ನೀನು ಯಾವ ಜನಾಂಗದವನು?” ಎಂದು ಪ್ರಶ್ನಿಸಿದರು.