Jonah 1:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಯೋನನು, “ನಾನು ಇಬ್ರಿಯನು, ನಾನು ಭೂಪರಲೋಕಗಳ ದೇವರಾದ ಯೆಹೋವನನ್ನು ಆರಾಧಿಸುವವನು. ಆತನು ಭೂಮಿಯನ್ನೂ ಸಾಗರಗಳನ್ನೂ ನಿರ್ಮಿಸಿದಾತನು” ಎಂದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರಿಗೆ “ನಾನು ಇಬ್ರಿಯನು; ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದ ದೇವರಾದ ಯೆಹೋವನ ಭಕ್ತನು” ಎಂದು ಹೇಳಿ,
Kannada BSI Bible 2016
ನಿನ್ನ ದೇಶ ಯಾವದು, ನೀನು ಯಾವ ಜನಾಂಗದವನು, ನಮಗೆ ತಿಳಿಸು ಅಂದರು. ಅವನು ಅವರಿಗೆ--ನಾನು ಇಬ್ರಿಯನು; ಸಮುದ್ರವನ್ನೂ ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರ ಲೋಕದ ದೇವರಾದ ಕರ್ತನಿಗೆ ಭಯಪಡುವವ ನಾಗಿದ್ದೇನೆಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಡಲನ್ನೂ ಒಣನೆಲವನ್ನೂ ಸೃಷ್ಟಿಸಿದ ಪರಲೋಕದೇವರಾದ ಯೆಹೋವನ ಭಕ್ತನು ಎಂದು ಹೇಳಿದನು.
Kannada Bible (KNCL) BSI 2016
ಅದಕ್ಕೆ ಯೋನನು: “ನಾನು ಹಿಬ್ರಿಯನು. ಸಮುದ್ರವನ್ನೂ ಭೂಮಿಯನ್ನೂ ಸೃಷ್ಟಿಸಿದ ಪರಲೋಕ ದೇವರಾದ ಸರ್ವೇಶ್ವರನ ಭಕ್ತನು ನಾನು,” ಎಂದು ಉತ್ತರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅವರಿಗೆ, “ನಾನು ಹಿಬ್ರಿಯನು. ಸಮುದ್ರವನ್ನೂ, ಒಣಗಿದ ಭೂಮಿಯನ್ನೂ ಉಂಟುಮಾಡಿದ ಪರಲೋಕದ ದೇವರಾದ ಯೆಹೋವ ದೇವರಿಗೆ ನಾನು ಆರಾಧಿಸುವವನಾಗಿದ್ದೇನೆ,” ಎಂದು ಹೇಳಿದನು.