Jonah 2:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀನು ನನ್ನನ್ನು ಸಮುದ್ರಕ್ಕೆ ಎಸೆದೆ. ನಿನ್ನ ಬಲವಾದ ತೆರೆಗಳು ನನ್ನ ಮೇಲೆ ಅಪ್ಪಳಿಸಿದವು. ನಾನು ನೀರಿನ ಆಳವಾದ ಸ್ಥಳಕ್ಕೆ ಮುಳುಗಿಹೋದೆ. ನಾನು ಸಮುದ್ರದ ನೀರಿನಿಂದ ಆವರಿಸಲ್ಪಟ್ಟೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನನ್ನನ್ನು ಸಮುದ್ರದ ಅಗಾಧಸ್ಥಳದಲ್ಲಿ ಹಾಕಿದ್ದೀಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ಸಮುದ್ರದ ಅಲೆಗಳೂ, ತೆರೆಗಳೂ ನನ್ನ ಮೇಲೆ ದಾಟಿ ಹೋದವು
Kannada BSI Bible 2016
ನನ್ನನ್ನು ನೀನು ಅಗಾಧದಲ್ಲಿಯೂ ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿ; ಪ್ರವಾಹಗಳು ನನ್ನನ್ನು ಸುತ್ತಿಕೊಂಡವು; ನಿನ್ನ ಎಲ್ಲಾ ಅಲೆಗಳೂ ನಿನ್ನ ತೆರೆಗಳೂ ನನ್ನ ಮೇಲೆ ದಾಟಿಹೋದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನನ್ನು ಸಮುದ್ರದ ಉದರದಲ್ಲಿ, ಅಗಾಧಸ್ಥಳದಲ್ಲಿ ಎಸೆದುಬಿಟ್ಟಿಯಲ್ಲಾ; ಪ್ರವಾಹವು ನನ್ನನ್ನು ಸುತ್ತಿಕೊಂಡಿತು; ಲೆಕ್ಕವಿಲ್ಲದ ನಿನ್ನ ಅಲೆಗಳೂ ತೆರೆಗಳೂ ನನ್ನ ಮೇಲ್ಗಡೆ ಹಾದುಹೋಗುತ್ತಿದ್ದವು.
Kannada Bible (KNCL) BSI 2016
ಸಾಗರದ ಉದರಕೆ ನೀನೆನ್ನ ತಳ್ಳಿರುವೆ ಅಗಾಧ ಜಲದೊಳಗೆ ದೂಡಿರುವೆ. ಸುತ್ತಮುತ್ತಲಿದೆ ಪ್ರವಾಹದ ಹೊಡೆತ ಮೇಲ್ಗಡೆ ಅಬ್ಬರಿಪ ಅಲೆಗಳ ಭೋರ್ಗರೆತ!
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ನೀವು ಅಗಾಧದಲ್ಲಿಯೂ, ಸಮುದ್ರಗಳ ಮಧ್ಯದಲ್ಲಿಯೂ ಹಾಕಿದಿರಿ. ಪ್ರವಾಹಗಳು ನನ್ನನ್ನು ಸುತ್ತಿಕೊಂಡವು. ನಿಮ್ಮ ಎಲ್ಲಾ ಅಲೆಗಳೂ ನಿಮ್ಮ ತೆರೆಗಳೂ ನನ್ನ ಮೇಲೆ ದಾಟಿಹೋದವು.