Jonah 2:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಸಮುದ್ರದ ನೀರು ನನ್ನನ್ನು ಮುಚ್ಚಿಬಿಟ್ಟಿತು. ನೀರು ನನ್ನ ಬಾಯಿಯನ್ನು ಮುಚ್ಚಿತು. ಆಗ ನನಗೆ ಉಸಿರಾಡಲಾಗಲಿಲ್ಲ. ನಾನು ಮುಳುಗುತ್ತಾ ಮುಳುಗುತ್ತಾ ಸಮುದ್ರದ ಆಳಕ್ಕೆ ಹೋದೆನು. ಸಮುದ್ರ ಪಾಚಿಗಳು ನನ್ನ ತಲೆಯನ್ನು ಸುತ್ತುಹಾಕಿದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಹಾನಿ ತಂದಿತು, ಮಹಾಸಾಗರವು ನನ್ನನ್ನು ಆವರಿಸಿತು, ಕಡಲಕಳೆಯು ನನ್ನ ತಲೆಯನ್ನು ಸುತ್ತಿಕೊಂಡಿತು.
Kannada BSI Bible 2016
ನೀರು ಗಳು ಪ್ರಾಣದ ಮಟ್ಟಿಗೂ ನನ್ನನ್ನು ಸುತ್ತಿಕೊಂಡವು; ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು; ಆಪುಗಳು ನನ್ನ ತಲೆಯನ್ನು ಸುತ್ತಿಕೊಂಡಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜಲರಾಶಿಯು ನನ್ನನ್ನು ಮುತ್ತಿ ನನ್ನ ಪ್ರಾಣಕ್ಕೆ ಬಂದಿತ್ತು, ಮಹಾಸಾಗರವು ನನ್ನನ್ನು ಆವರಿಸಿತು, ಪಾಚಿಯು ನನ್ನ ತಲೆಯನ್ನು ಸುತ್ತಿಕೊಂಡಿತು.
Kannada Bible (KNCL) BSI 2016
ಸುತ್ತುವರಿಯೆ ಜಲರಾಶಿ, ಉಸಿರು ಕಟ್ಟಿದಂತಾಯ್ತು ಸಾಗರವು ಸಂಪೂರ್ಣವಾಗೆನ್ನ ಆವರಿಸಿತು; ಎನ್ನ ಶಿರವನು ಜೊಂಡು ಸುತ್ತುಗಟ್ಟಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನನ್ನನ್ನು ಸುತ್ತುತ್ತಿದ್ದ ನೀರು, ನನ್ನನ್ನು ಭಯಪಡಿಸಿತು. ಅಗಾಧವು ನನ್ನನ್ನು ಸುತ್ತಲೂ ಮುಚ್ಚಿಕೊಂಡಿತು. ಜಂಬು ಹುಲ್ಲು ನನ್ನ ತಲೆಗೆ ಸುತ್ತಲಾಗಿತ್ತು.