Jonah 2:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾನು ಸಮುದ್ರದ ತಳದಲ್ಲಿದ್ದೆನು. ಅಲ್ಲಿಂದ ಪರ್ವತಗಳು ಉಗಮವಾಗುತ್ತವೆ. ‘ನಾನು ಈ ಸೆರೆಮನೆಯಲ್ಲಿ ಎಂದೆಂದಿಗೂ ಬಂಧಿತನಾದೆನು’ ಎಂದು ನೆನಸಿದೆನು. ಆದರೆ ನನ್ನ ದೇವರಾದ ಯೆಹೋವನು ಸಮಾಧಿಯಿಂದ ನನ್ನನ್ನು ಹೊರತಂದನು. ಯೆಹೋವನೇ ನೀನು ಪುನಃ ನನಗೆ ಜೀವ ಕೊಟ್ಟೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪರ್ವತಗಳ ತಳಹದಿಗೆ ಇಳಿದುಹೋದೆನು, ಭೂಲೋಕದ ದ್ವಾರಗಳ ಚಿಲಕಗಳು ಎಂದಿಗೂ ತೆಗೆಯದ ಹಾಗೆ ನನ್ನನ್ನು ಬಂಧಿಸಿದವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿನಿಂದ ಉದ್ಧರಿಸಿದ್ದೀ.
Kannada BSI Bible 2016
ಬೆಟ್ಟಗಳ ಬುಡದ ತನಕ ಇಳಿದು ಹೋದೆನು; ಭೂಮಿಯ ಅಡ್ಡದಂಡೆಗಳು ನಿತ್ಯವಾಗಿ ನನ್ನ ಸುತ್ತಲಿ ದ್ದವು; ಆದಾಗ್ಯೂ ಓ ದೇವರಾದ ನನ್ನ ಕರ್ತನೇ, ನೀನು ನನ್ನ ಪ್ರಾಣವನ್ನು ನಾಶನದೊಳಗಿಂದ ಎಬ್ಬಿಸಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪರ್ವತಗಳ ಬುಡದ ತನಕ ಇಳಿದೆನು, ಭೂಲೋಕದ ಅಗುಳಿಗಳು ಎಂದಿಗೂ ತೆಗೆಯದ ಹಾಗೆ ನನ್ನ ಹಿಂದೆ ಹಾಕಲ್ಪಟ್ಟವು; ನನ್ನ ದೇವರಾದ ಯೆಹೋವನೇ, ನೀನು ನನ್ನ ಪ್ರಾಣವನ್ನು ಅಧೋಲೋಕದೊಳಗಿಂದ ಉದ್ಧರಿಸಿದಿ.
Kannada Bible (KNCL) BSI 2016
ಪರ್ವತಗಳ ತಳಹದಿಗೆ ದೇವಾ, ನಾನಿಳಿದೆ ಮುಚ್ಚಿಕೊಂಡವು ಜಗದ ದ್ವಾರಗಳು ನನ್ನ ಹಿಂದೆ. ಎನ್ನ ಕಾಪಾಡಿದೆ ಅಂಥ ಕೋಪದಿಂದ ಸರ್ವೇಶ್ವರಾ, ಮೇಲಕ್ಕೆತ್ತಿದೆಯೆನ್ನ ಜೀವಸಹಿತ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬೆಟ್ಟಗಳ ಅಡಿಗಳ ಪರ್ಯಂತರ ಇಳಿದು ಹೋದೆನು. ಕೆಳಗಿನ ಭೂಮಿಯು ನನ್ನನ್ನು ಶಾಶ್ವತವಾಗಿ ನಿರ್ಬಂಧಿಸಿತು. ಆದರೂ ದೇವರಾದ ನನ್ನ ಯೆಹೋವ ದೇವರೇ, ನೀವು ನನ್ನ ಪ್ರಾಣವನ್ನು ತಗ್ಗಿನಿಂದ ಮೇಲಕ್ಕೆ ಎಬ್ಬಿಸಿದ್ದೀರಿ.