Jonah 2:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನನ್ನ ಆತ್ಮಕ್ಕೆ ಯಾವ ನಿರೀಕ್ಷೆಯೂ ಇರಲಿಲ್ಲ. ಆಗ ನಾನು ಯೆಹೋವನನ್ನು ಸ್ಮರಿಸಿದೆನು. ಯೆಹೋವನೇ, ನಾನು ನಿನಗೆ ಪ್ರಾರ್ಥಿಸಿದೆನು. ನೀನು ನಿನ್ನ ಪವಿತ್ರ ಆಲಯದಿಂದ ನನ್ನ ಪ್ರಾರ್ಥನೆಯನ್ನು ಕೇಳಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ನನ್ನ ಆತ್ಮವು ನನ್ನಲ್ಲಿ ಕುಂದಿಹೋದಾಗ ಯೆಹೋವನಾದ ನಿನ್ನನ್ನು ನೆನಪು ಮಾಡಿಕೊಂಡು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ಅದು ನಿನ್ನ ಪರಿಶುದ್ಧಾಲಯವನ್ನು ಬಂದು ಸೇರಿತು.
Kannada BSI Bible 2016
ನನ್ನ ಪ್ರಾಣವು ನನ್ನಲ್ಲಿ ಕುಂದಿಹೋದಾಗ ಕರ್ತನನ್ನು ಜ್ಞಾಪಕ ಮಾಡಿಕೊಂಡೆನು; ನನ್ನ ಪ್ರಾರ್ಥನೆಯು ನಿನ್ನ ಬಳಿಗೆ ನಿನ್ನ ಪರಿಶುದ್ಧ ಮಂದಿರದೊಳಗೆ ಬಂತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನನ್ನ ಆತ್ಮವು ನನ್ನಲ್ಲಿ ಕುಂದಿದಾಗ ಯೆಹೋವನಾದ ನಿನ್ನನ್ನು ಸ್ಮರಿಸಿದೆನು; ನನ್ನ ಬಿನ್ನಹವು ನಿನಗೆ ಮುಟ್ಟಿತು, ನಿನ್ನ ಪರಿಶುದ್ಧಾಲಯಕ್ಕೆ ಸೇರಿತು.
Kannada Bible (KNCL) BSI 2016
ನಂದಿದಂತಾಗಲು ಎನ್ನ ಪ್ರಾಣ ದೀವಿಗೆ ಮೊರೆಯಿಟ್ಟೆ, ಸರ್ವೇಶ್ವರಾ, ನಾ ನಿನಗೆ ನಿನ್ನ ಪರಿಶುದ್ಧ ಆಲಯದಲಿ ನೀನಾಸೀನನಿದ್ದೆ ಎನ್ನ ಪ್ರಾರ್ಥನೆಯನು ನೀನಾಲಿಸಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನನ್ನ ಪ್ರಾಣವು ನನ್ನಲ್ಲಿ ಕುಂದಿ ಹೋದಾಗ, ಯೆಹೋವ ದೇವರೇ ನಿಮ್ಮನ್ನು ಜ್ಞಾಪಕಮಾಡಿಕೊಂಡೆನು. ನನ್ನ ಪ್ರಾರ್ಥನೆಯು ನಿಮ್ಮ ಬಳಿಗೆ ನಿಮ್ಮ ಪರಿಶುದ್ಧ ಮಂದಿರದೊಳಗೆ ಬಂದಿತು.